ಶನಿವಾರ ರಾತ್ರಿ 9:30ರ ವೇಳೆಗೆ ಲಕ್ಷ್ಮೀ ನಗರದಿಂದ ಐಟಿಒ ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿಯಾಗಿದೆ. ಇನ್ನೋವಾ ಕಾರಿನಲ್ಲಿ ಕರ್ನಾಟಕದ ಶಾಸಕ ಅಭಯ್ ಪಾಟೀಲ್ ಹಾಗೂ ಕಿರಾರಿ ಶಾಸಕ ಅನಿಲ್ ಝಾ ಪ್ರಯಾಣಿಸುತ್ತಿದ್ದರು.

ನವದೆಹಲಿ: ದೆಹಲಿಯ ಪಿಡಬ್ಲ್ಯೂಡಿ ಕಚೇರಿ ಬಳಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ (MLA Abhay Patil) ಹಾಗೂ ದೆಹಲಿಯ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಸೇರಿ ಒಟ್ಟು 6 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತೊಂದು ಕಾರ್‌ಗೆ ಡಿಕ್ಕಿ

ಶನಿವಾರ ರಾತ್ರಿ 9:30ರ ವೇಳೆಗೆ ಲಕ್ಷ್ಮೀ ನಗರದಿಂದ ಐಟಿಒ ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿಯಾಗಿದೆ.

ಎರಡೂ ಕಾರಿನಲ್ಲಿದ್ದ 6 ಜನರಿಗೆ ಸಣ್ಣಪುಟ್ಟ ಗಾಯ

ಇನ್ನೋವಾ ಕಾರಿನಲ್ಲಿ ಕರ್ನಾಟಕದ ಶಾಸಕ ಅಭಯ್ ಪಾಟೀಲ್ ಹಾಗೂ ಕಿರಾರಿ ಶಾಸಕ ಅನಿಲ್ ಝಾ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಎರಡೂ ಕಾರಿನಲ್ಲಿದ್ದ ಎಲ್ಲಾ 6 ಜನರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.