Asianet Suvarna News Asianet Suvarna News

ಹಿಂದುಳಿದ ವರ್ಗಗಳ ಜಾತಿ ಗಣತಿ ಕಷ್ಟ: ಕೇಂದ್ರ

* ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸುವುದು ಆಡಳಿತಾತ್ಮಕವಾಗಿ ಕಠಿಣ

* ತೊಡಕಿನ ಕೆಲಸ. ಅಲ್ಲದೆ ಇಂಥ ಮಾಹಿತಿಯನ್ನು ಗಣತಿ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಪ್ರಜ್ಞಾಪೂರ್ವಕ ನಿರ್ಧಾರ 

Caste census of backward classes administratively difficult Govt to SC pod
Author
Bangalore, First Published Sep 24, 2021, 12:06 PM IST
  • Facebook
  • Twitter
  • Whatsapp

ನವದೆಹಲಿ(ಸೆ.24): ಹಿಂದುಳಿದ ವರ್ಗಗಳ(OBC) ಜಾತಿ ಗಣತಿ(Caste Census) ನಡೆಸುವುದು ಆಡಳಿತಾತ್ಮಕವಾಗಿ ಕಠಿಣ ಮತ್ತು ತೊಡಕಿನ ಕೆಲಸ. ಅಲ್ಲದೆ ಇಂಥ ಮಾಹಿತಿಯನ್ನು ಗಣತಿ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಪ್ರಜ್ಞಾಪೂರ್ವಕ ನಿರ್ಧಾರ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ(Supreme Court) ಮಾಹಿತಿ ನೀಡಿದೆ.

ಇತ್ತೀಚಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌(Nitish Kumar) ನೇತೃತ್ವದಲ್ಲಿ 10 ಪಕ್ಷಗಳ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಜನಗಣತಿ ನಡೆಸಬೇಕು ಎಂದು ಮನವಿ ಮಾಡಿತ್ತು. ಜೊತೆಗೆ ದೇಶದ ಹಲವು ರಾಜ್ಯಗಳಿಂದಲೂ ಇಂಥ ಬೇಡಿಕೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಅಭಿಪ್ರಾಯ ವ್ಯಕ್ತಪಡಿಸಿರುವುದು ಮಹತ್ವ ಪಡೆದುಕೊಂಡಿದೆ.

2011ರಲ್ಲಿ ನಡೆದ ಆರ್ಥಿಕವಾಗಿ ಹಿಂದುಳಿದವರ ಜಾತಿ ಗಣತಿ(Caste Census) ಸಾಕಷ್ಟುತಪ್ಪುಗಳಿಂದ ಕೂಡಿತ್ತು ಮತ್ತು ದೋಷಪೂರಿತವಾಗಿತ್ತು. ಜಾತಿ ಗಣತಿ ನಡೆಸುವುದು ಅತಿ ಕಠಿಣ ಕೆಲಸ. ಹಿಂದುಳಿದ ವರ್ಗಗಳ ಗಣತಿ ನಡೆಸುವುದು ಸರ್ಕಾರಕ್ಕೆ ಹೊರೆ ಆಗುತ್ತದೆ ಮತ್ತು ಅತಿ ಸಂಕೀರ್ಣತೆಯಿಂದ ಕೂಡಿದ ಕೆಲಸವಾಗಿದೆ ಎಂದು ಕೇಂದ್ರ ಹೇಳಿದೆ.

ಜಾತಿಗಣತಿ ನಡೆಸಲು ಕೇಂದ್ರಕ್ಕೆ ಸೂಚಿಸಬೇಕು ಎಂದು ಕೋರಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಮಾಹಿತಿ ಇದೆ.

Follow Us:
Download App:
  • android
  • ios