Asianet Suvarna News Asianet Suvarna News

IAF Chopper Crash: ಸಾವಿನ ಸಂಖ್ಯೆ 13ಕ್ಕೇರಿಕೆ, ಮೃತರ ಗುರುತು ಪತ್ತೆಗೆ DNA ಪರೀಕ್ಷೆ!

* ತಮಿಳುನಾಡಿನ ಕಾನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ

* ಸಿಡಿಎಸ್‌ ಬಿಪಿನ್ ರಾವತ್ ಸೇರಿ 143 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

* ದುರ್ಘಟನೆಯಲ್ಲಿ ರಾವತ್ ಪತ್ನಿ ಮಧುಲಿಕಾ ಸೇರಿ 13 ಮಂದಿ ಸಾವು

CDS Bipin Rawat IAF chopper crash 13 out of 14 on board confirmed dead pod
Author
Bangalore, First Published Dec 8, 2021, 5:13 PM IST

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕೂನೂರಿನಲ್ಲಿ ಸೇನೆಯ Mi-17V5 ಹೆಲಿಕಾಪ್ಟರ್ ಪತನಗೊಂಡಿದೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಮಂದಿ ವಿಮಾನದಲ್ಲಿದ್ದರು. ಸದ್ಯ ಬಂದ ಮಾಹಿತಿ ಅನ್ವಯ ವಿಮಾನದಲ್ಲಿದ್ದ 14 ಮಂದಿಯಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸೇರಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆನ್ನಲಾಗಿದೆ. ಸೇನಾ ಮಹಾದಂಡನಾಯಕ ಬಿಪಿನ್ ರಾವತ್ ಚಿಂತಾಜನಕವಾಗಿದ್ದು, ಅವರಿಗೆ ಕೂನೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಹೌದು ವೆಲ್ಲಿಂಗ್ಟನ್ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು. ಆದರೆ ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುವಾಗ, ಮಧ್ಯಾಹ್ನ 12.20ಕ್ಕೆ ಪತನಗೊಂಡಿದೆ. ಲ್ಯಾಂಡಿಂಗ್ ಸ್ಥಳದಿಂದ ಕೇವಲ 10 ಕಿಮೀ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಹದಿಮೂರು ಮಂದಿ ಸಾವನ್ನಪ್ಪಿದ್ದು, ಮೃತರ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿದೆ. 

ಹವಾಮಾನ ವೈಪರೀತ್ಯ ಹಿನ್ನೆಲೆ ಇಂಜಿನ್ ನಿಷ್ಕ್ರಿಯಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆಯಾದರೂ, ಭಾರತೀಯ ವಾಯುಸೇನೆ ದುರ್ಘಟನೆಯ ತನಿಖೆಗೆ ಆದೇಶಿಸಿದೆ. 

ಎಂಐ-17 ಹೆಲಿಕಾಪ್ಟರ್ ಅನ್ನು ವಿವಿಐಪಿ ಚಲನೆಯಲ್ಲಿ ಬಳಸಲಾಗುತ್ತದೆ

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

ಹೆಲಿಕಾಪ್ಟರ್‌ನಲ್ಲಿ ಯಾರೆಲ್ಲಾ ಇದ್ದರು?

CDS Bipin Rawat IAF chopper crash 13 out of 14 on board confirmed dead pod

ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್. ಎ. ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್. ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ, ಹವಾಲ್ದಾರ್ ಸತ್ಪಾಲ್.

Follow Us:
Download App:
  • android
  • ios