ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ಮನೆಗೆ ಕಳಿಸಿ: ಸಚಿವಾಲಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚಿಸಿದೆ.
ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚಿಸಿದೆ. ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸುವ ಸಾರ್ವಜನಿಕ ವಲಯದ ಉದ್ಯಮಗಳು, ಬ್ಯಾಂಕ್, ಸ್ವಾಯತ್ತ ಹಾಗೂ ಶಾಸನಬದ್ಧ ಸಂಸ್ಥೆಗಳಿಗೆ ನೌಕರರ ಕಾರ್ಯಕ್ಷಮತೆಯನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶಿಸಿದೆ.
ಸರ್ಕಾರಿ ನೌಕರರ ಕೆಲಸವನ್ನು ಪರಿಶೀಲಿಸಿ ಅವರನ್ನು ಉಳಿಸಿಕೊಳ್ಳಬೇಕೆ ಅಥವಾ ಕೆಲಸದಿಂದ ತೆಗೆದುಹಾಕಬೇಕೇ ಎಂಬುದನ್ನು ನಿರ್ಧರಿಸಲು ಕಾರ್ಯಕ್ಷಮತೆಯ ಆವರ್ತಕ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಿ ವರದಿಯನ್ನು ಸಲ್ಲಿಸಲು ವಿನಂತಿಸಿದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸದಿರುವ ಬಗ್ಗೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ.
ಅಕ್ರಮ ಹಣ ವರ್ಗಾವಣೆ ಕೇಸ್: 5 ತಿಂಗಳ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು
ಜಿಯೋ ಬಳಿಕ ವೊಡಾಫೋನ್, ಏರ್‌ಟೆಲ್ ಮೊಬೈಲ್ ಇಂಟರ್ನೆಟ್ ತುಟ್ಟಿ..!