ನವದೆಹಲಿ (ಸೆ.04) : ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ 8 ನ್ಯೂಟ್ರಾಸ್ಯುಟಿಕಲ್‌ (ಪೋಷಕಾಂಶಯುಕ್ತ) ಉತ್ಪನ್ನಗಳನ್ನು ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. ಈ ಉತ್ಪನ್ನಗಳನ್ನು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಅಡಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಜನೌಷಧಿ ಕೇಂದ್ರಗಳಲ್ಲಿ ಮಾರಾಟಕ್ಕೆ ಲಭ್ಯ ಇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಈ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನ್ನಗಳಿಗೆ ಹೋಲಿಸಬಹುದಾದ ಗುಣಮಟ್ಟಹಾಗೂ ಶೇ.26ರಷ್ಟುಕಡಿಮೆ ದರವನ್ನು ಹೊಂದಿವೆ. ಇದರಲ್ಲಿ ಪ್ರೋಟೀನ್‌ಯುಕ್ತ ದ್ರವ್ಯಗಳು, ಪೌಷ್ಟಿಕ ಪಾನೀಯಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವ ಬಿಸ್ಕೆಟ್‌ಗಳು ಸೇರಿವೆ.

ಪಿಸಿಒಎಸ್‌ ಬಂದದ್ದೇ ಹೆಲ್ದೀ ಹುಡ್ಗಿಯಾದೆ; ಸೆಪ್ಟೆಂಬರ್‌ ಪಾಲಿಸಿಸ್ಟಿಕ್‌ ಒವೇರಿಯನ್‌ ಸಿಂಡ್ರೋಮ್‌ ತಿಂಗಳು! .

ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಯಿಂದ ಬಳಲುತ್ತಿರುವವರಿಗೆ ಜನೌಷಧಿ ಕೇಂದ್ರಗಳಲ್ಲಿ ಕೈಗೆಟುಕವ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತಿದೆ. ದೇಶದಲ್ಲಿ 6,500ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, 10 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.