ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕೇಂದ್ರ ಸರ್ಕಾರದ ಗಿಫ್ಟ್, ಅರ್ಧ ದಿನ ರಜೆ ಘೋಷಣೆ!
ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕೆಲವೇ ದಿನ ಮಾತ್ರ ಬಾಕಿ. ಇದೀಗ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದೆ. ಕೇಂದ್ರ ಸರ್ಕಾರಿ ನೌಕರರು, ಕಚೇರಿಗಳಿಗೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಅರ್ಧ ದಿನ ರಜೆ ಘೋಷಿಸಿದೆ.
ನವದೆಹಲಿ(ಜ.18) ರಾಮ ಮಂದಿರ ಪ್ರಾಣಪ್ರತಿಷ್ಠೆ ಪ್ರಯುಕ್ತ ರಾಮ ಮಂದಿರದಲ್ಲಿ ಪೂಜಾ ವಿಧಿವಿಧಾನಗಳು ನಡೆಯುತ್ತಿದೆ. ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದೆ. ರಾಮಲಲ್ಲಾ ಮೆರವಣಿಗೆ, ಪೂಜೆ ಸೇರಿದಂತೆ ಹಲವು ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯುತ್ತಿದೆ. ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇದೀಗ ಕೇಂದ್ರ ಸರ್ಕಾರ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಬಂಪರ್ ಗಿಫ್ಟ್ ಘೋಷಿಸಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರು, ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿದೆ. ಜನವರಿ 22ರಂದು ಮಧ್ಯಾಹ್ನ 2.30ರ ವರೆಗೆ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿ, ನೌಕರರಿಗೆ ರಜೆ ನೀಡಲಾಗಿದೆ.
ದೇಶವೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾತರಗೊಂಡಿದೆ. ಮನೆ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ದೇವಸ್ಥಾನ, ಮಠ, ಗುಡಿಗಳು ಅಲಂಕೃತಗೊಂಡಿದೆ. ದೇಶದ ಜನ ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ವೀಕ್ಷಿಸಲು, ಶ್ರೀರಾಮ ಭಜನೆ, ಪೂಜೆಯಲ್ಲಿ ತಲ್ಲೀನರಾಗಲು ಬಯಸಿದ್ದಾರೆ. ಭಾರತೀಯರ ಧಾರ್ಮಿಕ ಭಾವನೆಯನ್ನು ಗೌರವಿಸಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ.
ರಾಮಮಂದಿರ ಪ್ರಾಣಪ್ರತಿಷ್ಠೆಗೆ ಶಾಲಾ ಕಾಲೇಜಿಗೆ ರಜೆ, ಮದ್ಯ ಮಾರಾಟ ನಿಷೇಧ; ಸಿಎಂ ಯೋಗಿ ಘೋಷಣೆ!
ಕೇಂದ್ರ ಸರ್ಕಾರ ಅಧೀನದಲ್ಲಿರುವ ಸರ್ಕಾರಿ ಕಚೇರಿಗಳು, ಅಧಿಕಾರಿಗಳು, ಸಂಸ್ಥೆಗಳಿಗೆ ಜನವರಿ 22ರಂದು ಅರ್ಧ ದಿನ ರಜೆ ಘೋಷಿಸಿದೆ. ಈ ಮೂಲಕ ಉದ್ಯೋಗಿಗಳು, ನೌಕರರು ರಾಮ ಮಂದಿರ ಪ್ರಾಣ ಪ್ರತಿಷ್ಠೆಯಲ್ಲಿ ಭಾಗೀದಾರರಾಗಲು ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.
ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದರೆ, ಹಲವು ರಾಜ್ಯಗಳು ಈಗಾಗಲೇ ಜನವರಿ 22ಕ್ಕೆ ರಜೆ ಘೋಷಿಸಿದೆ. 5ಕ್ಕೂ ಹೆಚ್ಚು ರಾಜ್ಯಗಳು ಜನವರಿ 22ರಂದ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಇಷ್ಟೇ ಅಲ್ಲ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆಯಲ್ಲಿ ಹಲವು ರಾಜ್ಯಗಳು ಮದ್ಯ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ.
ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಜೈಪುರದ ಮದ್ಯ- ಮಾಂಸದ ಅಂಗಡಿ ಬಂದ್!
ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಜನವರಿ 22ರಂದು ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಮದ್ಯ ಮಾರಾಟ ಹಾಗೂ ಮಾಂಸ ಮಾರಾಟವನ್ನೂ ನಿಷೇಧಿಸಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಹರ್ಯಾಣ, ಚತ್ತೀಸಘಡ ಸೇರಿದಂತೆ ಕೆಲ ರಾಜ್ಯಗಳು ಸಾರ್ವತ್ರಿಕ ರಜೆ ಘೋಷಿಸಿದೆ.
ಜನವರಿ 16ರಿಂದಲೇ ಆಯೋಧ್ಯೆ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಜನವರಿ 22ರ 12.30ಕ್ಕೆ ರಾಮ ಮಂದಿರ ಪ್ರಾಣಪ್ರತಿಷ್ಠೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಮಾಡಲಿದ್ದಾರೆ.