ನವದೆಹಲಿ(ಏ.18): ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಲು ದೆಹಲಿಯ ತಬ್ಲೀಘಿ ಜಮಾತ್‌ ಕಾರ್ಯಕರ್ತರೇ ಕಾರಣ ಎಂಬುದು ಬೆಳಕಿಗೆ ಬಂದ ಬೆನ್ನಲ್ಲೇ, ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ರೋಹಿಂಗ್ಯಾ ಮುಸ್ಲಿಮರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

ವೈರಸ್ ಭೀತಿ: ರಸ್ತೆ ಮೇಲೆ 500 ರು. ನೋಟುಗಳು ಬಿದ್ರೂ ಕೇಳೋರಿಲ್ಲ!

ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ತಬ್ಲೀಘಿ ಜಮಾತ್‌ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತದಲ್ಲಿರುವ ರೋಹಿಂಗ್ಯಾ ಮುಸ್ಲಿಮರೂ ಸಾಕಷ್ಟುಸಂಖ್ಯೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.

ಪ್ರಸಕ್ತ ದೆಹಲಿ, ಜಮ್ಮು, ಹೈದ್ರಾಬಾದ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 40000ಕ್ಕೂ ಹೆಚ್ಚು ರೋಹಿಂಗ್ಯಾ ವಲಸಿಗರು ವಾಸಿಸುತ್ತಿದ್ದಾರೆ.