ಕೊರೋನಾ 2ನೇ ಅಲೆ; ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸಲಹೆ!

ಲಸಿಕೆ ವಿತರಣೆ ಯಶಸ್ವಿಯಾಗಿ ನಡುಯುತ್ತಿರುವ ನಡುವೆ ಇದೀಗ 2ನೇ ಕೊರೋನಾ ಅಲೆ ಶುರುವಾಗಿದೆ. ಕೆಲ ರಾಜ್ಯಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಮಹತ್ವದ ಸಲಹೆ ನೀಡಿದೆ.

Centre issued an advisory to states to prevent 2nd wave of coronavirus ckm

ನವದೆಹಲಿ(ಫೆ.21):  ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸಲಹೆ ನೀಡಿದೆ.  ಪ್ರಮುಖವಾಗಿ ಕೊರೋನಾ ಹೆಚ್ಚುತ್ತಿರುವ ಮಹಾರಾಷ್ಟ್ರ ಕೇರಳ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಿಗೆ ಈ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.

ಪಂಚರಾಜ್ಯಗಳಲ್ಲಿ ಕೊರೊನಾ ಅಟ್ಟಹಾಸ: ಕರ್ನಾಟಕದ ಮುಂದಿದೆ ಮಹಾ ಸವಾಲು

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಶೇಕಡಾ 74 ರಷ್ಟು ಸಕ್ರೀಯ ಕೊರೋನಾ ಪ್ರಕರಣಗಳು ವರದಿಯಾಗಿದೆ. ಇನ್ನು ದಿನದ ಅಂಕಿ ಅಂಶದಲ್ಲೂ ಕೊರೋನಾ ಪ್ರಕರಣ ಗಣನೀಯ ಏರಿಕೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ, RT-PCR ಪರೀಕ್ಷೆ ಹೆಚ್ಚು ಮಾಡುವಂತೆ ಮಾರ್ಗಸೂಚಿಯಲ್ಲಿ ಹೇಳಿದೆ.

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಕೊರೋನಾ ಪ್ರೊಟೋಕಾಲ್ ಕಟ್ಟು ನಿಟ್ಟಾಗಿ ಪಾಲಿಸಲು ಸೂಚಿಸಿದೆ. ಕೊರೋನಾ ಹಾಟ್‌ಸ್ಪಾಟ್ ಗುರುತಿಸಿ ನಿರ್ಬಂಧ ವಿಧಿಸುವಂತೆಯೂ ಸೂಚಿಸಿದೆ. ಚತ್ತೀಸಘಡ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲೂ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ.

ಮಹಾರಾಷ್ಟ್ರ ಸರ್ಕಾರ ಮುಂಬೈ ಹಾಗೂ ಪುಣೆಗಲ್ಲಿ ನೈಟ್ ಕರ್ಫ್ಯೂ ವಿಧಿಸಿದೆ. ಕೆಲ ವಲಯಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸುತ್ತಿದೆ. ಇತ್ತ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ ಕಾರಣ, ಕರ್ನಾಟಕದಲ್ಲೂ ಮುನ್ನಚ್ಚೆರಿಕೆ ವಹಿಸಲಾಗುತ್ತಿದೆ.

Latest Videos
Follow Us:
Download App:
  • android
  • ios