ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಜನನಿಬಿಡ ಚೆನ್ನೈ ರಸ್ತೆಯ ಕಿಲ್ಪಾಕ್ (Kilpauk) ಎಂಬಲ್ಲಿ ನಡೆದಿದೆ.
ಚೆನ್ನೈ (ಸೆ.28): ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಜನನಿಬಿಡ ಚೆನ್ನೈ ರಸ್ತೆಯ ಕಿಲ್ಪಾಕ್ (Kilpauk) ಎಂಬಲ್ಲಿ ನಡೆದಿದೆ.
ಅಪಘಾತಕ್ಕೀಡಾದ ವ್ಯಕ್ತಿಯನ್ನು ಪಳನಿ ಎಂದು ಗುರುತಿಸಲಾಗಿದೆ. ಜನವಸತಿ ಪ್ರದೇಶವಾಗಿರುವ ಈ ನಗರದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಪಾದಾಚಾರಿಗಳು ನಡೆದಾಡುವುದು ಹೆಚ್ಚು. ನಿನ್ನೆ ಬುಧವಾರ ರಸ್ತೆಯಲ್ಲಿ ಪಳನಿ ಎಂಬಾತ ನಡೆದುಹೋಗುತ್ತಿರುವಾಗ, ಎದುರುಗಡೆಯಿಂದ ವೇಗವಾಗಿ ಬಂದಿರುವ ಕಾರು ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮೃತ ವ್ಯಕ್ತಿ ಮೇಲಕ್ಕೆ ಚಿಮ್ಮಿ ಹಾರಿಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ದೃಶ್ಯ ಭಯಂಕರವಾಗಿದೆ.
ಇನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಡಿಕ್ಕಿಹೊಡೆದಿರುವ ವ್ಯಕ್ತಿ ಜಯಕುಮಾರ್ ಎಂದು ಗುರುತಿಸಲಾಗಿದ್ದು. ಇದಕ್ಕೂ ಮೊದಲು ಹೀಗೆ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಆರೋಪಿ. ಸದ್ಯ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು. ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ
