Bharat Jodo Yatra ಮಕ್ಕಳ ದುರ್ಬಳಕೆ, ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಮಕ್ಕಳ ಆಯೋಗ !
ಭಾರತ್ ಜೋಡೋ ಯಾತ್ರೆ ಮೂಲಕ ದೇಶದಲ್ಲಿ ಅತೀ ದೊಡ್ಡ ರ್ಯಾಲಿ ಆಯೋಜಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಕ್ಕಳ ಹಕ್ಕುಗಳ ಆಯೋಗ ಗರಂ ಆಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಪ್ರಕರಣ ಇದೀಗ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತರುವ ಸಾಧ್ಯತೆಗಳು ಗೋಚರಿಸುತ್ತಿದೆ.
ನವದೆಹಲಿ(ಸೆ.14): ಕಾಂಗ್ರೆಸ್ ದೇಶದಲ್ಲಿ ಅತೀ ದೊಡ್ಡ ಯಾತ್ರೆ ಕೈಗೊಂಡಿದೆ. ಕನ್ಯಾಕುಮಾರಿಯಿಂದ ಆರಂಭಿಸಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಕೇರಳ ಪ್ರವೇಶಿಸಿದೆ. ನಾಯಕ ರಾಹುಲ್ ಗಾಂಧಿ ಸಾರಥ್ಯದಲ್ಲಿ ಇಡೀ ದೇಶದಲ್ಲಿ ಈ ಯಾತ್ರೆ ನಡೆಯುತ್ತಿದೆ. ಆದರೆ ಭಾರತ್ ಜೋಡೋ ಯಾತ್ರೆ ಮೊದಲ ದಿನದಿಂದಲೇ ಕೆಲ ವಿವಾದಕ್ಕೂ ಕಾರಣವಾಗಿದೆ. ಇತ್ತೀಚೆಗೆ ಹಿಂದೂ ಸಮುದಾಯದ ವಿರುದ್ಧ ಕಿಡಿ ಕಾರುವ ಪಾದ್ರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಾಹುಲ್ ಗಾಂಧಿ ವಿವಾದ ಸೃಷ್ಟಿಮಾಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮಕ್ಕಳ ಹಕ್ಕುಗಳ ಆಯೋಗ ಕಿಡಿ ಕಾರಿದೆ. ರಾಜಕೀಯ ರ್ಯಾಲಿ, ಸಮಾವೇಶದಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುವುದು ಕಾನೂನು ಬಾಹಿರವಾಗಿದೆ. ರಾಹುಲ್ ಗಾಂಧಿ ವಿರುದ್ಧ ಗರಂ ಆಗಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕ್ರಮಕ್ಕೆ ಆಗ್ರಹಿಸಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಮಕ್ಕಳ ಹಕ್ಕುಗಳ ಆಯೋಗ, ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಭಾರತ್ ಜೋಡೋ ಯಾತ್ರೆ(Bharat Jodo Yatra) ಹಾಗೂ ರಾಹುಲ್ ಗಾಂಧಿ(Rahul Gandhi) ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದಲ್ಲಿ(National Commission for Protection of Child Rights) ಕೆಲ ದೂರುಗಳು ದಾಖಲಾಗಿದೆ. ರಾಹುಲ್ ಗಾಂಧಿ ತಮ್ಮ ರಾಜಕೀಯ ರ್ಯಾಲಿಯಲ್ಲಿ(Political rally) ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ರಾಜಕೀಯ ಉದ್ದೇಶದ ರ್ಯಾಲಿಯಾಗಿದೆ. ಇದರಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ತಪ್ಪು. ಹೀಗಾಗಿ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಈ ದೂರುಗಳನ್ನು ಪರಿಶೀಲಿಸಿದ ಮಕ್ಕಳ ಹಕ್ಕುಗಳ ಆಯೋಗ, ನೇರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ(Election Commission) ಪತ್ರ ಬರೆದಿದೆ. ರಾಹುಲ್ ಗಾಂಧಿ ಯಾತ್ರೆಯಲ್ಲಿ ರಾಜಕೀಯ ಉದ್ದೇಶಕ್ಕೆ ಮಕ್ಕಳನ್ನು ದುರ್ಬಳಕೆ (misusing' kids)ಮಾಡಿಕೊಂಡಿದ್ದಾರೆ. ಈ ದೂರಿನ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.
'ಭಾರತ್ ಜೋಡೋ ಅಲ್ಲ ಇದು ಸೀಟ್ ಜೋಡೋ..' ಕಾರ್ಟೂನ್ ಮೂಲಕ ಕಾಂಗ್ರೆಸ್‌ಗೆ ತಿವಿದ ಕಮ್ಯುನಿಸ್ಟರು!
ರಾಹುಲ್ ಗಾಂಧಿ ಯಾತ್ರೆ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಹಾಗೂ ಫೋಟೋಗಳಲ್ಲಿ ಮಕ್ಕಳನ್ನು ಬಳಸಿಕೊಂಡಿರುವುದು ಸ್ಪಷ್ಟವಾಗಿದೆ. ಯಾತ್ರೆಯಲ್ಲಿ ಮಕ್ಕಳನ್ನು ಬಳಸಿಕೊಂಡಿರುವುದು ಸ್ಪಷ್ಟವಾದರೆ ಕ್ರಮ ಜರುಗಿಸಲಾಗುವುದು ಎಂದು ಮಕ್ಕಳ ಹಕ್ಕುಗಳ ಆಯೋಗ ಹೇಳಿದೆ.
ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ ಪ್ರಾರಂಭಿಸಿರುವ ಭಾರತ ಜೋಡೋ ಯಾತ್ರೆಯಲ್ಲಿ ಮಕ್ಕಳು ಭಾಗಿಯಾಗುತ್ತಿರುವುದನ್ನು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಶ್ನಿಸಿದೆ. ಮಕ್ಕಳನ್ನು ರಾಹುಲ್ ರಾಜಕೀಯ ಸಾಧನವಾಗಿ ಬಳಸಿಕೊಂಡಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಗಾಂಧಿ ಹಾಗೂ ಜವಾಹರ್ ಬಾಲ್ ಮಂಚ್ ಮಕ್ಕಳನ್ನು ಗುರಿಯಾಗಿಸಿಕೊಂಡು ರಾಜಕೀಯದಲ್ಲಿ ಬೆಳವಣಿಗೆ ಹೊಂದಲು ತಂತ್ರಗಾರಿಕೆ ರೂಪಿಸಿಕೊಂಡಿದೆ ಎಂದು ಎನ್‌ಸಿಪಿಸಿಆರ್ ದೂರಿದೆ. ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ಚುನಾವಣಾ ಆಯೋಗದ ನಿಯಮ ಉಲ್ಲಂಘನೆಗೆ ಒಳಗಾಗುತ್ತದೆ. ಆದರೆ ಭಾರತ ಜೋಡೋ ಯಾತ್ರೆಯಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಮಾಡಲಾಗಿದೆ. ಈ ರೀತಿ ಮಾಡುವುದು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ, ಆ.21ರ ಉಲ್ಲಂಘನೆ ಇದಾಗಿದ್ದು, ಕಾಂಗ್ರೆಸ್, ರಾಹುಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎನ್‌ಸಿಪಿಸಿಆರ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ರಾಹುಲ್ ಗಾಂಧಿ 'Bharat Jodo Yatra' ಬ್ಯಾನರ್ ನಲ್ಲಿ ಸಿದ್ದರಾಮಯ್ಯ ನಾಪತ್ತೆ!