ಚೀನಾದಿಂದ ಅಕ್ರಮವಾಗಿ ಹಣ ಪಡೆದು, ಭಾರತ ವಿರೋಧಿ ಹಾಗೂ ಚೀನಾ ಸ್ನೇಹಿ ಸುದ್ದಿಗಳನ್ನು ಪ್ರಕಟ ಮಾಡುತ್ತಿದ್ದ ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ (ಅ.3): ಡಿಜಿಟಲ್ ನ್ಯೂಸ್ ವೆಬ್‌ಸೈಟ್ ನ್ಯೂಸ್‌ಕ್ಲಿಕ್‌ನ ಸುದ್ದಿಗಳಿಗೂ ಚೀನಾಕ್ಕೂ ಲಿಂಕ್ ಇರುವ ವಿಚಾರಕ್ಕೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಮಂಗಳವಾರ (ಅಕ್ಟೋಬರ್ 3) ಅದರ ಸಂಸ್ಥಾಪಕರಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದಾರೆ. ವಿದೇಶಿ ನಿಧಿಯ ತನಿಖೆಗೆ ಸಂಬಂಧಿಸಿದಂತೆ ದಾಳಿ ನಡೆಸಿದ ನಂತರ ನ್ಯೂಸ್‌ಕ್ಲಿಕ್ ನ್ಯೂಸ್ ಪೋರ್ಟಲ್‌ನ ಕಚೇರಿಯನ್ನು ದೆಹಲಿ ಪೊಲೀಸ್‌ನ ಸ್ಪೆಷಲ್ ಸೆಲ್ ಸೀಜ್ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಪೆಷಲ್ ಸೆಲ್‌ನಲ್ಲಿ ದಾಖಲಾದ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ದಾಳಿ, ವಶಪಡಿಸಿಕೊಳ್ಳುವಿಕೆ ಮತ್ತು ಕಸ್ಟಡಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇಬ್ಬರು ಆರೋಪಿಗಳಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 37 ಪುರುಷ ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಯಿತು ಮತ್ತು 9 ಮಹಿಳಾ ಶಂಕಿತರನ್ನು ಅವರ ನಿವಾಸದಲ್ಲಿ ವಿಚಾರಣೆ ನಡೆಸಲಾಯಿತು. ಈ ಅವಧಿಯಲ್ಲಿ, ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ/ತನಿಖೆಗೆ ಸಂಗ್ರಹಿಸಲಾಗಿದೆ.
ಚೀನಾದ ಫಂಡ್ ಪಡೆದು ದೇಶವಿರೋಧಿ ಸುದ್ದಿ, ನ್ಯೂಸ್‌ಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ!
ಯೋತ್ಪಾದನಾ-ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಾದ ಅಭಿಸಾರ್ ಶರ್ಮಾ ಮತ್ತು ಊರ್ಮಿಳೇಶ್ ಮತ್ತು ಇತರರಿಗೆ ಸಂಬಂಧಿಸಿದ 30 ಆವರಣಗಳ ಮೇಲೆ ದೆಹಲಿ ಪೊಲೀಸರ ವಿಶೇಷ ಕೋಶ ಮಂಗಳವಾರ ದಾಳಿ ನಡೆಸಿತ್ತು. ಚೀನಾವನ್ನು ಬೆಂಬಲಿಸಿ ಪ್ರಚಾರ ಮಾಡಿದ್ದಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ನ್ಯೂಸ್‌ಕ್ಲಿಕ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
