ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಎಂಟು ತಿಂಗಳಲ್ಲಿ ಕೇವಲ 15 ಸಾಕ್ಷಿಗಳ ವಿಚಾರಣೆ ನಡೆದಿದ್ದು, ವಿಚಾರಣೆ ವಿಳಂಬವಾಗುತ್ತಿರುವ ಕಾರಣ ನೀಡಿ ಜಾಮೀನಿಗಾಗಿ ಮನವಿ ಮಾಡಲಾಗಿದೆ.

ನವದೆಹಲಿ (ಮೇ.4): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

Add Asianetnews Kannada as a Preferred SourcegooglePreferred

ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿಲ್ಲ:

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2025ರ ಆಗಸ್ಟ್ 14ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಆದರೆ, ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳದ ಕಾರಣ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಹೊಸ ರಿಟ್ ಅರ್ಜಿ ಸಲ್ಲಿಸಿದ್ದು, ಜಾಮೀನಿಗೆ ಮನವಿ ಮಾಡಿದ್ದಾರೆ.

273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆ

ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿಲ್ಲ. 273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷಗಳೇ ಬೇಕಾಗುತ್ತದೆ. ಹೀಗಾಗಿ, ದರ್ಶನ್‌ಗೆ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.