Asianet Suvarna News Asianet Suvarna News

ಸಿಎಎ ದೇಶದ ಕಾನೂನು, ಇದರ ಜಾರಿಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್‌ ಶಾ

ಪೌರತ್ವ ತಿದ್ದುಪಡಿ ಕಾಯ್ದೆ ಎನ್ನುವುದು ದೇಶದ ಕಾನೂನು ಇದರ ಜಾರಿಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ನಡುವೆ 2024ರ ಮಾರ್ಚ್‌ 30 ರಂದು ಸಿಎಎ ಕರಡು ಸಿದ್ಧವಾಗಲಿದೆ ಎಂದು ಕೇಂದ್ರ ಸಚಿವ ಅಜಯ್‌ ಮಿಶ್ರಾ ಹೇಳಿದ್ದಾರೆ. 
 

Citizenship Amendment Act is the country law no one can stop it and we will implement it says Amit shah san
Author
First Published Nov 29, 2023, 4:05 PM IST

ಕೋಲ್ಕತ್ತಾ (ನ.29): ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಎಂದೇ ಜನಪ್ರಿಯವಾಗಿರುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿ ಮಾಡಲಿದೆ. ಇದರ ಜಾರಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಹೇಳಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯ ಅಂತಿಮ ಕರಡು 2024ರ ಮಾರ್ಚ್ 30 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಕಳೆದ ಭಾನುವಾರ ಹೇಳಿದ್ದಾರೆ. ಅದರೊಂದಿಗೆ ಕೇಂದ್ರ ಸರ್ಕಾರ ಕೂಡ ಸಿಎಎ ಜಾರಿಗೆ ಈಗಾಗಲೇ ಕೆಲಸ ಆರಂಭ ಮಾಡಿದ್ದು ಸ್ಪಷ್ಟವಾಗಿದೆ. ಬುಧವಾರ ಕೋಲ್ಕತ್ತಾದಲ್ಲಿ ಮೆಗಾ ಸಮಾವೇಶದಲ್ಲಿ ಮಾತನಾಡಿದ ಅಮಿತ್‌ ಶಾ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನಯ ತರಾಟೆಗೆ ತೆಗೆದುಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು "ತುಷ್ಟೀಕರಣ ರಾಜಕೀಯ" ದಲ್ಲಿ ತೊಡಗಿದೆ ಎಂದು ಆರೋಪಿಸಿದ ಬಿಜೆಪಿ ನಾಯಕ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಜನರು ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಎಎ ದೇಶದ ಕಾನೂನು ಮತ್ತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಬೆಲೆ ತೆತ್ತಾದರೂ ಅದನ್ನು ಜಾರಿಗೆ ತರಲಿದೆ ಎಂದು ಷಾ ತಮ್ಮ ಭಾಷಣದಲ್ಲಿ ಹೇಳಿದರು. 'ಪೌರತ್ವ (ತಿದ್ದುಪಡಿ) ಕಾಯ್ದೆ ದೇಶದ ಕಾನೂನು, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಮತ್ತು ನಾವು ಅದನ್ನು ಜಾರಿಗೆ ತರುತ್ತೇವೆ' ಎಂದಿದ್ದಾರೆ.

2019ರ ಪೌರತ್ವ (ತಿದ್ದುಪಡಿ) ಕಾಯಿದೆ, 2014ರ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡಲು ಅನುಕೂಲವಾಗುವಂತೆ ಮಾಡುತ್ತದೆ. ಪೌರತ್ವ (ತಿದ್ದುಪಡಿ) ಕಾಯಿದೆ, 2019 ಅನ್ನು ಡಿಸೆಂಬರ್ 12 ರಂದು ಅಧಿಸೂಚಿಸಲಾಯಿತು ಮತ್ತು 2020 ರಲ್ಲಿ ಜನವರಿ 10 ರಂದು ಜಾರಿಗೆ ಬಂದಿತು.

ಲೋಕಸಭೆ ಚುನಾವಣೆಯ ಪ್ರಚಾರ ಪ್ರಾರಂಭಿಸಲು ಕೋಲ್ಕತ್ತಾದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಒಳನುಸುಳುವಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಮತದಾರರ ಕಾರ್ಡ್‌ ಮತ್ತು ಆಧಾರ್ ಕಾರ್ಡ್‌ಗಳನ್ನು ನುಸುಳುಕೋರರಿಗೆ ಬಹಿರಂಗವಾಗಿ ಮತ್ತು ಅಕ್ರಮವಾಗಿ ವಿತರಿಸಲಾಗುತ್ತಿದೆ ಎಂದು ಆರೋಪಿಸಿದರು. "ಇಷ್ಟು ಒಳನುಸುಳುವಿಕೆ ಸಂಭವಿಸುವ ರಾಜ್ಯದಲ್ಲಿಅಭಿವೃದ್ಧಿ ನಡೆಯುತ್ತದೆಯೇ?" ಎಂದು ಶಾ ಪ್ರಶ್ನೆ ಮಾಡಿದ್ದಾರೆ. “ಅದಕ್ಕಾಗಿಯೇ ಮಮತಾ ಬ್ಯಾನರ್ಜಿ CAA ಅನ್ನು ವಿರೋಧಿಸುತ್ತಿದ್ದಾರೆ ... ಆದರೆ CAA ದೇಶದ ಕಾನೂನು ಎಂದು ನಾನು ಹೇಳುತ್ತೇನೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾವು ಅದನ್ನು ಕಾರ್ಯಗತಗೊಳಿಸುತ್ತೇವೆ ' ಎಂದು ಅಮಿತ್‌ ಶಾ ಸ್ಪಷ್ಟವಾಗಿ ಹೇಳಿದ್ದಾರೆ. 

ದೀಪಿಕಾ ಪಡುಕೋಣೆ ಜೆಎನ್‌ಯುಗೆ ಹೋಗಿದ್ದೇ ನನ್ನ ಚಿತ್ರದ ಸೋಲಿಗೆ ಕಾರಣ: ಮೇಘನಾ ಗುಲ್ಜಾರ್!

2020 ರಲ್ಲಿ ಸಂಸತ್ತಿನಲ್ಲಿ ಈ ಕಾಯ್ದೆಗೆ ಅಂಗೀಕಾರ ನೀಡಲಾಗಿದೆ. ಸಿಎಎ ಮುಸ್ಲಿಮರನ್ನು ಹೊರತುಪಡಿಸುತ್ತದೆ ಮತ್ತು ಜಾತ್ಯತೀತ ರಾಷ್ಟ್ರದ ನಂಬಿಕೆಗೆ ಪೌರತ್ವವನ್ನು ಲಿಂಕ್ ಮಾಡುತ್ತದೆ ಎಂದು ಹೇಳುವ ಅಸಂವಿಧಾನಿಕ ಎಂದು ತೃಣಮೂಲ ಕಾಂಗ್ರೆಸ್ (TMC) ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಸಿಎಎಗೆ ಕಾನೂನು ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಕೇಂದ್ರವು ಈ ಹಿಂದೆ ಹೇಳಿತ್ತು. ಭಾನುವಾರ, ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಸಿಎಎಗೆ ನಿಯಮಗಳನ್ನು ಮಾರ್ಚ್ 30, 2024 ರೊಳಗೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ ಹಿಂದೂ, ಸಿಖ್ಖರಿಗೆ ಪೌರತ್ವ ಕಾಯ್ದೆ, 1955ರಡಿ ಸಿಗಲಿದೆ Citizenship

2026ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ ಎಂದು ಗೃಹ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. “ಆದರೆ ಅದಕ್ಕೂ ಮೊದಲು, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಭರ್ಜರಿಯಾಗಿ ಗೆಲ್ಲಿಸಬೇಕು. ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ನಾನು ನಿಮ್ಮೆಲ್ಲರನ್ನೂ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
 

Follow Us:
Download App:
  • android
  • ios