ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಅವರ ಅಜ್ಜಿ ಸಾವಿತ್ರಿಬಾಯಿ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದು, ಕುಟುಂಬದಲ್ಲಿ ತೀವ್ರ ಶೋಕ ಆವರಿಸಿದೆ. ದೆಹಲಿಯಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ ತಾಯಿ ಮತ್ತು ಕುಟುಂಬದಲ್ಲಿ ತೀವ್ರ ಶೋಕ ಆವರಿಸಿದೆ. ದೆಹಲಿಯಲ್ಲಿ ಪಕ್ಷದ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಈ ದುರದೃಷ್ಟಕರ ಘಟನೆ ಸಂಭವಿಸಿದೆ. ಈ ವೇಳೆ ಅವರ ಅಜ್ಜಿ ಬೆಳಗ್ಗೆ ನಿಧನರಾಗಿದ್ದಾರೆ.

ಆಜಿಯ ನಿಧನ!

ಸಾವಿತ್ರಿಬಾಯಿ ಶಂಕರ್ ದೀಪ್ಕೆ (ಸುಮಾರು 80-85 ವರ್ಷ) ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್ ಪಿಂಪ್ರಿ ಗ್ರಾಮದಲ್ಲಿ ಜೀವಿಸಿದ ಅವರು ದೀರ್ಘಕಾಲದ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆಯು ಭಾನುವಾರ ಬೆಳಿಗ್ಗೆ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಅಭಿಜೀತ್ ದೀಪ್ಕೆ ವಶಕ್ಕೆ!

ಇದೀಗ ದೆಹಲಿ ಪ್ರತಿಭಟನೆಯಲ್ಲಿ ದಿಪ್ಕೆ ಬಂಧನವಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ CJP ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂಬೈನಿಂದ ದೆಹಲಿಗೆ ಆಗಮಿಸಿದ ಅಭಿಜೀತ್ ದೀಪ್ಕೆ ಅವರನ್ನು ವಿಮಾನ ನಿಲ್ದಾಣದಲ್ಲಿಯೇ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಭಿಜೀತ್‌ ಈಗ ಪೊಲೀಸ್ ವಶದಲ್ಲಿದ್ದಾಗಲೇ ಅಜ್ಜಿಯ ಸಾವಿನ ದುಃಖದ ಸುದ್ದಿ ಬಂದಿದೆ.

ಪ್ರತಿಭಟನೆಯ ಹಿನ್ನೆಲೆ ಮತ್ತು ಬಿಗಿ ಭದ್ರತೆ!

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಿಜೆಪಿ ಈ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈಗಾಗಲೇ ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದು, ದೆಹಲಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಭಿಜೀತ್ ದೀಪ್ಕೆ ಅನುಪಸ್ಥಿತಿಯಲ್ಲಿ ಪಕ್ಷದ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂದೆ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ.

ಮೂವರ ಬಂಧನ!

ಈಗಾಗಲೇ ಅಶುತೋಷ, ದಿಪ್ಕೆ, ದ್ರವ್‌ ರಾಠಿ ಸೇರಿ ಹಲವರ ಬಂಧನವಾಗಿದೆ. ಈ ನಿಟ್ಟಿನಲ್ಲಿ ಈಗಾಗಗಲೇ ಬಂಧನವಾದರೆ, ಕಾರ್ಯಕರ್ತರಿಗೆ ಕುಳಿತಲ್ಲೇ ಪ್ರತಿಭಟನೆಗೆ ಮುಂದಾಗಿ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಇನ್ನು ಬಿಗುವಿನ ವಾತಾವರಣವೇ ನಿರ್ಮಾಣವಾಗಿದೆ. ಆದ್ದರಿಂದ ಮುಂದೆನು ಆಗುತ್ತದೆಯೋ ಎನ್ನುವುದನ್ನು ಕಾಯ್ದು ನೋಡಬೇಕಿದೆ.