Asianet Suvarna News Asianet Suvarna News

ಪಾಸಿಟೀವ್ ರೇಟ್ ಶೇ.1.5ಕ್ಕೆ ಇಳಿಕೆ; ದೆಹಲಿಯಲ್ಲಿ ಮೇ.31ರಿಂದ ಅನ್‌ಲಾಕ್ ಆರಂಭ!

  • ಮೇ.31ರಿಂದ ದೆಹಲಿಯಲ್ಲ ಅನ್‌ಲಾಕ್‌ ಪ್ರಕ್ರಿಯೆ ಆರಂಭ
  • ಮಹತ್ವದ ನಿರ್ಧಾರ ತೆಗೆದುಕೊಂಡ ಅರವಿಂದ್ ಕೇಜ್ರಿವಾಲ್ ಸರ್ಕಾರ
  • ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ
CM  Arvind Kejriwal announces Delhi unlock to begin gradually from May 31 ckm
Author
Bengaluru, First Published May 28, 2021, 4:14 PM IST | Last Updated May 28, 2021, 4:14 PM IST

ನವದೆಹಲಿ(ಮೇ.28): ದೇಶದಲ್ಲಿನ ಕೊರೋನಾ ಪ್ರಕರಣ ಸಂಖ್ಯೆ ಇಳಿಕೆಯಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ದೆಹಲಿಯಲ್ಲಿ ಇದೀಗ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ದೆಹಲಿಯಲ್ಲಿ ಕೊರೋನಾ ಪಾಸಿಟೀವ್ ರೇಟ್ ಶೇಕಡಾ 1.5ಕ್ಕೆ ಇಳಿಕೆಯಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಮೇ.31ರಿಂದ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಘೋಷಿಸಿದ್ದಾರೆ.

ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಸೋಂಕಿತರ ಕುಟುಂಬಕ್ಕೆ 5 ಲಕ್ಷ...

ದಿನಗೂಲಿ ಕಾರ್ಮಿಕ ರನ್ನು ಗಮನದಲ್ಲಿರಿಸಿಕೊಂಡು ಕೇಜ್ರಿವಾಲ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಿದ ಜನರನ್ನು ಹಸಿವಿನಿಂದ ಸಾಯಲು ಬಿಡುವುದಿಲ್ಲ. ಹೀಗಾಗಿ ಕಟ್ಟಡ ನಿರ್ಮಾಣ, ಕಾರ್ಖಾನೆಗಳು ಸೋಮವಾರ ದಿಂದ ಆರಂಭಿಸಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಮೇ.31ರಿಂದ ಮೊದಲ ಹಂತದ ಅನ್‌ಲಾಕ್ ಪ್ರಕ್ರಿಯೆ ಆರಂಭಗೊಳ್ಳಲಿದೆ. ಇದರಲ್ಲಿ ಕೆಲ ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ಇಂದು(ಮೇ.28) ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಈ ವಿಚಾರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

ದೆಹಲಿಯಲ್ಲಿ ಇಂದು ಕೊರೋನಾ ಪ್ರಕರಣ ಸಂಖ್ಯೆ 1,100ಕ್ಕೆ ಇಳಿಕೆಯಾಗಿದೆ. ಹಲವು ಸಮಸ್ಯೆ, ಸವಾಲು ಎದುರಿಸಿದ ನಾವು, ಕೊನೆಗೂ 2ನೇ ಅಲೆ ನಿಯಂತ್ರಣ ತರುವಲ್ಲಿ ಯಶಸ್ವಿಯಾಗಿದ್ದೇವೆ. ಆದರೆ ಎಚ್ಚರಿಕೆ ಅತೀ ಅಗತ್ಯ ಎಂದು ಕೇಜ್ರಿವಾಲ್ ಹೇಳಿದ್ದಾರೆ

Latest Videos
Follow Us:
Download App:
  • android
  • ios