Mysore Dasara 2022 ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಬೊಮ್ಮಾಯಿ ಘೋಷಣೆ!
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಭರ್ಜರಿ ತಯಾರಿಗಳು ನಡೆಯುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ಬಾರಿ ಮೈಸೂರು ದಸರಾವನ್ನು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಲಿದ್ದಾರೆ.
ಬೆಂಗಳೂರು(ಸೆ.10): ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಕ್ಷಣಗಣನೇ ಆರಂಭವಾಗಿದೆ. ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ಬಾರಿ ಮೈಸೂರು ದಸರಾ ಉತ್ಸವನ್ನು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಈ ಬಾರಿ ಮೈಸೂರು ದರಸಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ. ಪ್ರತಿಷ್ಠಿತ ಮೈಸೂರು ದಸರಾಗೆ ಸರ್ಕಾರ ಈಗಾಗಲೇ ಹಲವು ಸುತ್ತಿನ ಪೂರ್ವಭಾವಿ ಸಭೆ ನಡೆಸಿದೆ. ಮೈಸೂರು ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ 2022ರ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಸೆಪ್ಟೆಂಬರ್ 26 ದಸರಾ ಆರಂಭಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಉದ್ಘಾಟನೆ ವಿಚಾರ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ ಮಾಡಿಸುವ ನಿರ್ಧಾರಕ್ಕೆ ಬರಲಾಗಿತ್ತು. ಸಭೆ ಬಳಿಕ ರಾಷ್ಟ್ರಪತಿಗೆ ಪತ್ರ ಬರೆಯಲಾಗಿತ್ತು. ಇದೀಗ ಪತ್ರಕ್ಕೆ ಸಮ್ಮತಿ ಸೂಚಿಸಿ ಪ್ರತಿಕ್ರಿಯೆ ಬಂದಿದೆ. ಹೀಗಾಗಿ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ನಾಯಕರನ್ನೊಳಗೊಂಡ ಸಮಿತಿ ಹಲವು ಸುತ್ತಿನ ಸಭೆ ನಡೆಸಿದೆ. ಕೊರೋನಾ ಕಾರಣ 2021ರಲ್ಲಿ ಸರಳ ದಸರಾ(mysore dasara) ಆಚರಿಸಲಾಗಿತ್ತು. 2021ರ ಮೈಸೂರು ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಉದ್ಘಾಟಿಸಿದ್ದರು. ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು(president draupadi murmu) ಉದ್ಘಾಟನೆ ಮಾಡಲಿದ್ದಾರೆ.
Mysuru: ದಸರಾ ಆನೆಗಳಿಗೆ ಚೌತಿ ಅಂಗವಾಗಿ ವಿಶೇಷ ಪೂಜೆ
ಮೈಸೂರು ದಸರಾ ಗಜಪಯಣ
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಮೊದಲ ತಂಡದಲ್ಲಿ ಅಂಬಾರಿ ಆನೆ ಅಭಿಮನ್ಯು, ಅರ್ಜುನ, ಭೀಮ, ಗೋಪಾಲಸ್ವಾಮಿ, ಧನಂಜಯ, ಮಹೇಂದ್ರ, ಕಾವೇರಿ, ಚೈತ್ರ ಮತ್ತು ಲಕ್ಷೀ್ಮ ಸೇರಿ 9 ಆನೆಗಳು ಕಾಡಿನಿಂದ ನಾಡಿನತ್ತ ಹೊರಟಿದೆ.
10 ಕೋಟಿ ಬಿಡುಗಡೆ: ಎಸ್‌ಟಿಎಸ್
ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕ ಮತ್ತು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಸದ್ಯದಲ್ಲಿಯೇ . 10 ಕೋಟಿ ಅನುದಾನ ಬಿಡುಗಡೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ದಸರಾ ಮಹೋತ್ಸವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆನೆಗಳ ಪೋಸ್ಟರ್ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಮತ್ತು ಶ್ರೀರಂಗಪಟ್ಟಣ ದಸರೆಗೆ ತಲಾ .1ಕೋಟಿ ಅನುದಾನ ನೀಡಲಾಗುವುದು. ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರಮನೆ ಮಂಡಳಿ ವತಿಯಿಂದ . 5 ಕೋಟಿ, ಹೊರಗೆ ನಡೆಯುವ ಕಾರ್ಯಕ್ರಮಗಳಿಗೆ ಎಂಡಿಎ ವತಿಯಿಂದ . 10 ಕೋಟಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ದಸರಾಗೆ Lingambudhi Botanical Garden ಲೋಕಾರ್ಪಣೆದಸರಾಗೆ Lingambudhi Botanical Garden ಲೋಕಾರ್ಪಣೆ