ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ಸಂಭವ ಇನ್ವೆಸ್ಟ್ ಕರ್ನಾಟಕ ಪೂರ್ವಭಾವಿ ಸಭೆ ಕಾರಣ ದೆಹಲಿಗೆ ಸಿಎಂ ಸಚಿವ ಸಂಪುಟ ಸಭೆಯನ್ನೂ ರದ್ದುಪಡಿಸಿ ಹೈಕಮಾಂಡ್ ಬೇಟಿ
ಬೆಂಗಳೂರು(ಮೇ.11): ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಠಿಕಾಣಿ ಹೂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ರಚನೆಗಾಗಿ ಕಸರತ್ತು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಕಾಲಾವಕಾಶ ಕೋರಿದ್ದು ಬುಧವಾರ ಭೇಟಿ ನಿಗದಿಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಚಿವ ಸಂಪುಟ ವಿಚಾರವಾಗಿ ದೆಹಲಿಗೆ ಬಂದು ಮಾತುಕತೆ ಮಾಡುವಂತೆ ಅಮಿತ್ ಶಾ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದಾಗ ಸೂಚಿಸಿದ್ದರು. ಮಂಗಳವಾರ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ 2022’ದ ಪೂರ್ವಭಾವಿ ಸಭೆ ಹಿನ್ನೆಲೆಯಲ್ಲಿ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹೈಕಮಾಂಡ್ ಮುಖಂಡರ ಭೇಟಿಗೆ ಯತ್ನಿಸಿದ್ದರು. ಆದರೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ಅವರು ದೆಹಲಿಯಲ್ಲಿ ಇಲ್ಲದ್ದರಿಂದ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ನಿಗದಿಪಡಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನೂ ರದ್ದುಪಡಿಸಿರುವ ಮುಖ್ಯಮಂತ್ರಿ ಬುಧವಾರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
Silicon City Bengaluru ಅಮೆರಿಕದ ಸಿಲಿಕಾನ್ ವ್ಯಾಲಿ ಜತೆ ಕರ್ನಾಟಕ ಸ್ಪರ್ಧೆ, ಸಿಎಂ!
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ಕಸರತ್ತು ಮತ್ತು ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಭೇಟಿಯಾಗಲಿದ್ದಾರೆ.
ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಾಗುವುದೆಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಬೊಮ್ಮಾಯಿ ಈಗ ಮೇನ್ ಟ್ರ್ಯಾಕ್‌ಗೆ ಬಂದಿದ್ದಾರೆ. ಹೈಕ್ಲಾಸಾಗಿ ಬೌಲಿಂಗ…, ಬ್ಯಾಟಿಂಗ… ಮಾಡುತ್ತಿದ್ದಾರೆ. ನಿಗದಿತ ಸಮಯದಲ್ಲಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಸಿಎಂ ಪರಮಾಧಿಕಾರವೆಂದರು.
ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿಗೆ ಬರ್ತಾರೋ, ಎಲ್ಲಿಗೆ ಹೋಗ್ತಾರೋ ಗೊತ್ತಾಗುವುದಿಲ್ಲ. ಅವರವರ ಅಡ್ಜಸ್ಟ… ಮೆಂಚ್ ಎಲ್ಲಿರುತ್ತೊ ಅಲ್ಲಿಗೆ ಹೋಗ್ತಾರೆ ಎಂದು ಸೋಮಣ್ಣ ಹೇಳಿದರು.
ಮತ್ತೆ ದಿಲ್ಲಿಗೆ ಹಾರಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ
ಬಜೆಟ್ ಘೋಷಣೆ ಜಾರಿ ವಿಳಂಬ ಸಹಿಸಲ್ಲ: ಸಿಎಂ
ಬಜೆಟ್‌ನಲ್ಲಿ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ. ನಾಲ್ಕು ತಿಂಗಳ ಕೆಲಸವನ್ನು 12 ತಿಂಗಳು ಮಾಡಲಾಗುತ್ತಿದೆ. ಈಗಿನಿಂದ ಬದಲಾವಣೆ ಆರಂಭವಾಗಿದ್ದು, ಜನರಿಗೆ ವಿಶ್ವಾಸ ಬರುವಂತೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಅಧಿಕಾರ ವಿಕೇಂದ್ರೀಕರಣವಾಗಿ ಮೂರು ದಶಕಗಳ ಮೇಲಾಗಿದ್ದು, ಅದರ ಲಾಭವನ್ನು ಹಿಂದಿರುಗಿ ನೋಡಬೇಕಾಗಿದೆ. ಕೇಂದ್ರೀಕೃತ ಆಡಳಿತ ಮಾಡಿದರೆ ಜನರಿಗೆ ಆಡಳಿತದ ಲಾಭ, ಸರ್ಕಾರದ ಕಾರ್ಯಕ್ರಮಗಳು ಮುಟ್ಟುವುದಿಲ್ಲ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಜನರಿಂದ ಜನರಿಗೋಸ್ಕರ ಆಡಳಿತವಾಗಬೇಕು. ಬಡವರ ಪರವಾಗಿ ಕೆಲಸ ಮಾಡಲು, ಧೈರ್ಯವಾಗಿ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯಬಾರದು. ಕೆಳಹಂತದ ಅಧಿಕಾರಿಗಳ ಮೇಲೆ ನಿಯಂತ್ರಣ ಇರಬೇಕು. ತಪ್ಪಾದರೆ ಕೇಳುವ ನೈತಿಕತೆ ಇರಬೇಕು. ಪಿಡಿಒಗಳನ್ನು ಶಿಸ್ತಿನಲ್ಲಿಡಬೇಕು. ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
