Asianet Suvarna News Asianet Suvarna News

ಮಳೆ ಪೀಡಿತ ನಾಲ್ಕು ಜಿಲ್ಲೆಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ

ರಾಜ್ಯದಲ್ಲಿ ಕಳೆದ 10 ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ ಮನೆಗೆಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದಲ್ಲಿ‌ ಆಸ್ತಿಪಾಸಿಗಳು ಹಾನಿಯಾದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

CM Bommai tomorrow will visit flood hit districts of Karnataka state akb
Author
Bangalore, First Published Jul 11, 2022, 11:56 AM IST

ಬೆಂಗಳೂರು (ಜು. 11): ರಾಜ್ಯದಲ್ಲಿ ಕಳೆದ 10 ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ ಮನೆಗೆಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದಲ್ಲಿ‌ ಆಸ್ತಿಪಾಸಿಗಳು ಹಾನಿಯಾದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ನಾಲ್ಕು ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಭೇಟಿ‌ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು ಸ್ವೀಕರಿಸಲಿದ್ದಾರೆ. ಕೊಡಗು (Coorg), ಮಂಗಳೂರು (Dakshina Kannada), ಉಡುಪಿ (Udupi) ಹಾಗೂ ಕಾರವಾರ (Uttara kannada) ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ.

ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ (CM Basavaraja Bommai) ಪ್ರತಿಕ್ರಿಯಿಸಿದ್ದು,‌ ನಾಳೆಯಿಂದ ಎರಡು ದಿನಗಳ ಕಾಲ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ನಾಳೆ ಕೊಡಗು , ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಉಡುಪಿಯಲ್ಲಿ (Udupi) ವಾಸ್ತವ್ಯ ಮಾಡಿ ನಾಡಿದ್ದು ಉಡುಪಿ ಮತ್ತು ಕಾರವಾರ ಜಿಲ್ಲೆಯಲ್ಲಿ ಪರಿಶೀಲನೆ ಮಾಡ್ತೀನಿ ಎಂದರು. ಈಗಾಗಲೇ ಮಳೆ ಹಾನಿ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದಾನೆ. ನಾನು ಮಳೆ ಹಾನಿ ಕುರಿತು ಜಿಲ್ಲೆಯಲ್ಲಿ ಸಭೆ ನಡೆಸಿ ಪರಿಹಾರಗಳು ಮತ್ತು ಕೆಲ ಸೂಚನೆಗಳನ್ನ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. 

ಘಟ್ಟಪ್ರದೇಶಗಳಲ್ಲಿ ಭಾರೀ ಮಳೆ: 4 ಪ್ರಮುಖ ಘಾಟಿ ರಸ್ತೆಗಳು ಅಪಾಯದಲ್ಲಿ..!

ಉಸ್ತುವಾರಿ ಸಚಿವರುಗಳು ನಾಪತ್ತೆ:  ರಾಜ್ಯದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದರು ಉಸ್ತುವಾರಿ ಸಚಿವರುಗಳು ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ರಾಜದಲ್ಲಿ ಉಸ್ತುವಾರಿ ಸಚಿವರುಗಳು ನಾಪತ್ತೆಯಾಗಿದ್ದಾರೆ. ಸಿಎಂ ಕೇವಲ ಆನ್ ಲೈನ್ ಮೀಟಿಂಗ್‌ಗೆ ಸೀಮಿತರಾಗಿದ್ದಾರೆ. 2019ರ ಪ್ರವಾಹ ಸಂದರ್ಭದಲ್ಲಿ ಸಂಪುಟವೇ ಇರಲಿಲ್ಲ. 2020ರ ಪ್ರವಾಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ತಿಕ್ಕಾಟ ನಡೆಯುತ್ತಿತ್ತು. 2021ರಲ್ಲಿ ಸಮರ್ಪಕ ನೆರೆ ಪರಿಹಾರ ನೀಡಲಿಲ್ಲ. ಈಗ ಮತ್ತೊಮ್ಮೆ ರಾಜ್ಯದಲ್ಲಿ ಮಳೆ ಹಾನಿಯಾಗಿದೆ. ಜಿಲ್ಲೆಗಳ ಉಸ್ತುವಾರಿ ಸಚಿವರುಗಳು ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. 

ಇಂದೂ ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌: ಉ.ಕ, ದ.ಕ, ಉಡುಪಿಯಲ್ಲಿ ಭಾರೀ ಮಳೆ

ಸಿಎಂ ಆನ್‌ಲೈನ್ ಮೀಟಿಂಗ್‌ಗಳಿಗೆ (Online Meeting) ಸೀಮಿತರಾಗಿದ್ದಾರೆ. ಜನರನ್ನು ಕೇಳುವವರಾರು? ಎಂದು ಪ್ರಶ್ನೆ ಕಾಂಗ್ರೆಸ್‌ ನಾಯಕರು ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ದೇ  ರಾಜ್ಯದಲ್ಲಿ ಮಳೆ ಅಬ್ಬರದಿಂದ ಪ್ರವಾಹದ ಸ್ಥಿತಿ ಉಂಟಾಗಿದೆ, 40% ಪರ್ಸೆಂಟ್ BJPಸರ್ಕಾರ ಕೇಂದ್ರ ಸರ್ಕಾರದ ನೆರವು ಕೇಳಲು ಮೀನಾಮೇಷ ಎಣಿಸುತ್ತಿರುವುದೇಕೆ? ಕೈಗೊಂಡ ರಕ್ಷಣಾ ಕ್ರಮಗಳೇನು? ಆಶ್ರಯ ಕೇಂದ್ರಗಳನ್ನು ತೆರೆಯದಿರುವುದೇಕೆ? ಮನೆ ಹಾನಿಗೆ ಕೇವಲ ₹10,000 ಪರಿಹಾರ ಸಾಕೇ? ಪ್ರಾಣ ಕಳೆದುಕೊಂಡ ಜನ, ಜಾನುವಾರುಗಳಿಗೆ ನೀಡಿದ ಪರಿಹಾರವೇನು? ಎಂದು ಟ್ವಿಟರ್‌ನಲ್ಲಿ (Twitter) ರಾಜ್ಯ ಸರ್ಕಾರಕ್ಕೆ (State Govt) ಕಾಂಗ್ರೆಸ್ ಪ್ರಶ್ನೆ ಮಾಡಿದೆ.

Follow Us:
Download App:
  • android
  • ios