
ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ತೀವ್ರಗೊಂಡಿದೆ. ಕೇಂದ್ರ ಸರ್ಕಾರ ಕಾಕ್ರೋಚ್ ಪಾರ್ಟಿಯ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಿತ್ತಾ?
ನೀಟ್ ಪೇಪರ್ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಂತರ್ ಮಂತರ್‌ನಿಂದ ಸಂಸತ್ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ವಿರುದ್ದ ಪೊಲೀಸ್, ಭದ್ರತಾ ಪಡೆಗಳನ್ನು ಬಳಸಲಾಗಿದೆ. ಕಾಕ್ರೋಚ್ ಜನತಾ ಪಾರ್ಟಿ, ವಿದ್ಯಾರ್ಥಿಗಳು, ಭದ್ರತೆಯಲ್ಲಿದ್ದ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದೇ ವೇಳೆ ಕಾಕ್ರೋಚ್ ಜನತಾ ಪಾರ್ಟಿ , ಕೇಂದ್ರ ಸಚಿವ ಜೆಪಿ ನಡ್ಡಾ ಭೇಟಿಯಾಗಿ ಮೂರು ಬೇಡಿಕೆ ಸಲ್ಲಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಲಘುವಾಗಿ ಪರಿಗಣಿಸಿತ್ತಾ?