Asianet Suvarna News Asianet Suvarna News

ಅನಂತ್‌ನಾಗ್‌ ಎನ್‌ಕೌಂಟರ್‌, ಕರ್ನಲ್‌ ಮನ್‌ಪ್ರೀತ್‌ ಸಿಂಗ್‌ ವೀರಮರಣ

ಕರ್ನಲ್ ಮನ್‌ಪ್ರೀತ್ 19 ರಾಷ್ಟ್ರೀಯ ರೈಫಲ್ಸ್‌ನಲ್ಲಿ ನಿಯೋಜಿಸಲಾಗಿತ್ತು ಮತ್ತು ಕಮಾಂಡಿಂಗ್ ಅಧಿಕಾರಿಯಾಗಿದ್ದರು. 2020 ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಮಾಂಡಿಂಗ್ ಅಧಿಕಾರಿಯೊಬ್ಬರು ವೀರ ಮರಣವನ್ನಪ್ಪಿದ್ದ ಮೊದಲ ಘಟನೆ ಇದಾಗಿದೆ. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಮುಂದುವರಿದಿದೆ.

Colonel manpreet singh martyred in encounter with terrorists in Anantnag after 3 years a CO was killed san
Author
First Published Sep 13, 2023, 6:46 PM IST

ಶ್ರೀನಗರ (ಸೆ.13):  ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಎನ್‌ಕೌಂಟರ್‌ನಲ್ಲಿ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರ ಗುಂಡಿನಿಂದ ತೀವ್ರವಾಗಿ ಗಾಯಗೊಂಡಿದ್ದ ಕರ್ನಲ್ ಮನ್‌ಪ್ರೀತ್ ಸಿಂಗ್ ವೀರ ಮರಣವನ್ನಪ್ಪಿದ್ದಾರೆ. ಅವರು 19 ರಾಷ್ಟ್ರೀಯ ರೈಫಲ್ಸ್‌ನಲ್ಲಿ ನಿಯೋಜನೆಯಾಗಿದ್ದ ಅವರು ಕಮಾಂಡಿಂಗ್‌ ಅಧಿಕಾರಿಯಾಗಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ 2020ರ ಬಳಿಕ ಇದೇ ಮೊದಲ ಬಾರಿಗೆ ಕಮಾಂಡಿಂಗ್‌ ಅಧಿಕಾರಿಯೊಬ್ಬರು ಉಗ್ರರ ಜೊತೆಗಿನ ಎನ್‌ಕೌಂಟರ್‌ನಲ್ಲಿ ಸಾವು ಕಂಡಿದ್ದಾರೆ. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಸೇನಾಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ನಡುವೆ ಎನ್‌ಕೌಂಟರ್‌ ನಡೆಯುತ್ತಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಕರ್ನಲ್ ಮನ್‌ಪ್ರೀತ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್‌ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಡೋಲ್ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ಬೆಳಗ್ಗೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಆರಂಭಿಕ ಗುಂಡಿನ ದಾಳಿಯಲ್ಲಿ ಕರ್ನಲ್ ಮತ್ತು ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಶ್ಮೀರ ವಲಯ ಪೊಲೀಸ್‌ ಈ ಕುರಿತಾದ ಮಾಹಿತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಅನಂತ್‌ನಾಗ್‌ನ ಕೋಕರ್‌ನಾಗ್‌ ಪ್ರದೇಶದಲ್ಲಿ ಎನ್‌ಕೌಂಟರ್‌ ಆರಂಭವಾಗಿರುವ ಬಗ್ಗೆ ಮಾಹಿತಿ ನೀಡಿತ್ತು. ಇದರಲ್ಲಿ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್‌ನ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿತ್ತು. ಸೇನೆಯ ಪ್ರಕಾರ, ಭಯೋತ್ಪಾದಕರ ಉಪಸ್ಥಿತಿಯ ಮಾಹಿತಿಯ ಆಧಾರದ ಮೇಲೆ, ಸೆಪ್ಟೆಂಬರ್ 12-13 ರ ಮಧ್ಯರಾತ್ರಿಯಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

 

ಶುಕ್ರವಾರ ಮುಂಜಾನೆಯ ಸೇನೆಯೆ ಭರ್ಜರಿ ಭೇಟೆ, ಐವರು ಪಾಕ್‌ ಭಯೋತ್ಪಾದಕರ ಎನ್‌ಕೌಂಟರ್‌!

ಭಾರತೀಯ ಸೇನೆಯನ್ನು ಬೆಂಬಲಿಸಿ ಎಂದು ಹೇಳಿ ಸಾವಿಗೆ ಶರಣಾದ ಜಮ್ಮುಕಾಶ್ಮೀರದ ವ್ಯಕ್ತಿ

Follow Us:
Download App:
  • android
  • ios