ಕಾಂಗ್ರೆಸ್ ಶಾಸಕರ ಅಡ್ಡಮತದಾನ, ಹಿಮಾಚಲ ಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ಅಭಿಷೇಕ್ ಮನು ಸಿಂಘ್ವಿಗೆ ಸೋಲು!
ಕಾಂಗ್ರೆಸ್ ಪಕ್ಷಕ್ಕೆ ಮಹಾ ಆಘಾತ ಎನ್ನುವಂತೆ ಹಿಮಾಚಲ ಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಅನುಭವಿ ವಕೀಲ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ.
ನವದೆಹಲಿ (ಫೆ.27): ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮಹಾ ಆಘಾತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಮುಖ ಅಭ್ಯರ್ಥಿ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಅನುಭವಿ ವಕೀಲ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. 6 ಮಂದಿ ಕಾಂಗ್ರೆಸ್ ಶಾಸಕರು ಅಡ್ಡಮತದಾನ ಮಾಡಿದ್ದರಿಂದ ಡ್ರಾ ಮೂಲಕ ಬಿಜೆಪಿ ಯ ಹರ್ಷ ಮಹಜನ್ ಗೆಲುವು ಕಂಡಿದ್ದಾರೆ. 68 ಸದಸ್ಯ ಬಲದ ವಿಧಾನಸಭೆಯಲ್ಲಿ ಕೇವಲ 25 ಶಾಸಕರನ್ನು ಹೊಂದಿದ್ದರೂ, ಈ ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನವನ್ನು ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದು ಕಾಂಗ್ರೆಸ್ ಸರ್ಕಾರದಲ್ಲಿ ಇರುವ ದೊಡ್ಡ ಮಟ್ಟದ ಅಸಮಾಧಾನವನ್ನೂ ಕೂಡ ಹೊರಹಾಕಿದೆ. ಈ ಸೋಲು ಕಾಂಗ್ರೆಸ್ ಪಾಲಿಗೆ ಬರೀ ಸೋಲು ಮಾತ್ರವಲ್ಲ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇಂದು ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಮಾತ್ರವೇ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದಲ್ಲಿ ಅಧಿಕಾರದಲ್ಲಿದ್ದು, ಅದರಲ್ಲಿ ಹಿಮಾಚಲ ಕೂಡ ಒಂದಾಗಿದೆ. ಆದರೆ, ರಾಜ್ಯಸಭೆಯ ಈ ಸೋಲು ಮುಂದಿನ ಲೋಕಸಭೆ ಚುನಾವಣೆಗೂ ದೊಡ್ಡ ಏಟು ನೀಡಲಿದೆ.
ಚುನಾವಣೆಯಲ್ಲಿ ಬಿಜೆಪಿ ಹರ್ಷ್ ಮಹಾಜನ್ ಹಾಗೂ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಇಬ್ಬರೂ ಕೂಡ ತಲಾ 34 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ 6 ಶಾಸಕರು ಅಡ್ಡ ಮತದಾನ ಮಾಡಿದರೆ, 3 ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ನೀಡಿದರು. ಇನ್ನು ಫಲಿತಾಂಶ ನಿರ್ಣಯಕ್ಕಾಗಿ ಲಾಟ್ಸ್ ಮೊರೆ ಹೋಗಲಾಯಿತು. ಈ ವೇಳೆ ಮಹಾಜನ್ ಅವರ ಹೆಸರು ಬರುವುದರೊಂದಿಗೆ ಅಭಿಷೇಕ್ ಮನು ಸಿಂಘ್ವಿ ಸೋಲು ಕಾಣುವಂತಾಯಿತು.
ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಘೋಷಣೆ ಮಾಡಿದ ಹಿಮಾಚಲ ಪ್ರದೇಶದ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್, 'ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದ ಬಹುಮತವನ್ನು ಹೊಂದಿದ್ದರೂ, ಇದ್ದ ಏಕೈಕ ರಾಜ್ಯಸಭಾ ಸ್ಥಾನದಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಈ ಹತದಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಗೆಲುವು ಸಾಧ್ಯವೇ ಇರದಿದ್ದ ಈ ಸ್ಥಾನವನ್ನು ನಾವು ಗೆದ್ದುಕೊಂಡಿದ್ದೇವೆ' ಎಂದು ಹೇಳಿದ್ದಾರೆ.
ಮರು ಅಂಗೀಕೃತ ವಿಧೇಯಕ ರಾಷ್ಟ್ರಪತಿಗೆ ಕಳಿಸಬೇಕಿಲ್ಲ: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಚಾಟಿ
ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ 40 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸುಲಭವಾಗಿ ಗೆಲ್ಲಿಸಬಹುದಿತ್ತು. ಆದರೆ, ಚುನಾವಣೆಯ ವೇಳೆ ಕಾಂಗ್ರೆಸ್‌ನ 6 ಮಂದಿ ಶಾಸಕರು ಹಾಗೂ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಮೂರು ಪಕ್ಷೇತರ ಶಾಸಕರು ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾವಣೆ ಮಾಡಿದ್ದಾರೆ.
ಸರಿಯಾದ ಲೆಕ್ಕಪತ್ರ ಸಲ್ಲಿಸದ ಕಾಂಗ್ರೆಸ್ ವಕ್ತಾರ ಸಿಂಘ್ವಿಗೆ 56 ಕೋಟಿ ದಂಡ!