ನವದೆಹಲಿ( ಆ.02)  ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸ್ಚಾರ್ಜ್ ಆಗಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದ್ದು ಗಂಗಾ ರಾಮ್ ಆಸ್ಪತ್ರೆಯಿಂದ ಭಾನುವಾರ ಮನೆಗೆ ತೆರಳಿದ್ದಾರೆ.

ಜುಲೈ.30ರಂದು ಸಂಜೆ ಏಳು ಗಂಟೆ ಸಮಯದಲ್ಲಿ ರೂಟಿನ್ ಚೆಕ್ ಅಪ್ ಮತ್ತು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ಆಗಮಿಸಿದ್ದ ವೇಳೆ ಅವರನ್ನು ದಾಖಲು ಮಾಡಿಕೊಳ್ಳಲಾಗಿತ್ತು.

ಸೋನಿಯಾ ಟ್ರಸ್ಟ್ ನಲ್ಲಿ ವಿದೇಶಿ ಹಣ, ಏನಿದರ ಕತೆ!

ಎದೆ ಮತ್ತು ಉಸಿರಾಟದ ತಜ್ಞ ಡಾ.ಅರೂಪ್ ಕುಮಾರ್ ಬಸು ನೇತೃತ್ವದ ವೈದ್ಯರ ತಂಡವು ಸೋನಿಯಾ ಗಾಂಧಿಯವರ ಆರೋಗ್ಯ ತಪಾಸಣೆ ನಡೆಸಿತು. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಚೇರ್ ಮನ್ ಡಾ.ಡಿ.ಎಸ್.ರಾಣಾ ಮಾಹಿತಿ ನೀಡಿದ್ದಾರೆ.

ಸದ್ಯದ ರಾಜಕೀಯ ವಾತಾವರಣದ ಬಗ್ಗೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯರೊಂದಿಗೆ ಗುರುವಾರ ಸೋನಿಯಾ ಸಭೆ ನಡೆಸಿದ್ದರು. ಕೊರೋನಾ ವೈರಸ್ ದೇಶದ ಮೇಲೆ ಯಾವ ರೀತಿ ಕೆಟ್ಟ ಪರಿಣಾಮ ಉಂಟುಮಾಡುತ್ತಿದೆ ಎಂಬುದರ ಬಗ್ಗೆಯೂ ಚರ್ಚೆ ಆಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಅಗ್ರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.