ಶ್ರೀರಾಮ ಪ್ರಾಣಪ್ರತಿಷ್ಠೆಯಿಂದ ದೂರ ಉಳಿಯುವ ಮೂಲಕ ಹಿಂದೂ ಭಾವನೆಗಳಿಗೆ ಕಾಂಗ್ರಸ್ ಧಕ್ಕೆ ತಂದಿದೆ ಅನ್ನೋ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಪ್ರಮುಖ ನಾಯಕ ಅರ್ಜುನ್ ಮೋದ್ವಾಡಿಯಾ ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ  ಸಮೀಪದಲ್ಲೇ ಈ ಆರೋಪ ಹಾಗೂ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ಆಘಾತ ನೀಡಿದೆ.

ನವದೆಹಲಿ(ಮಾ.04) ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇತ್ತ ಕಾಂಗ್ರೆಸ್ ಸೀಟು ಹಂಚಿಕೆಯ ಅಂತಿಮ ಘಟ್ಟ ತಲುಪಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಈ ತಯಾರಿ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮೇಲಿಂದ ಮೇಲೆ ಆಘಾತ ಎದುರಾಗುತ್ತಿದೆ. ಇದೀಗ ಗುಜರಾತ್ ಕಾಂಗ್ರೆಸ್ ನಾಯಕ, ಮಾಜಿ ಅಧ್ಯಕ್ಷ ಅರ್ಜುನ್ ಮೋದ್ವಾಡಿಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧಅರ್ಜುನ್ ಮೋದ್ವಾಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ಅರ್ಜುನ್ ಮೋದ್ವಾಡಿಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವ ಕೆಲ ವಿಚಾರ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮತ್ತಷ್ಟು ಹಿನ್ನಡೆ ತಂದಿದೆ. ಪ್ರಮುಖವಾಗಿ ಅರ್ಜುನ್ ರಾಮ ಮಂದಿರ ವಿಚಾರ ಹಾಗೂ ಕಾಂಗ್ರೆಸ್ ನಡುದುಕೊಂಡ ರೀತಿಯನ್ನು ಟೀಕಿಸಿದ್ದಾರೆ. ಇದರ ಜೊತೆಗೆ ರಾಹುಲ್ ಗಾಂಧಿ ಅಸ್ಸಾಂನಲ್ಲಿ ಗದ್ದಲ ಸೃಷ್ಟಿಸಲು ಯತ್ನಿಸಿದ ಘಟನೆಯನ್ನು ಉಲ್ಲೇಖಿಸಿದ್ದಾರೆ.

ಬಿಜೆಪಿಗರು ದೇಶಪ್ರೇಮಿಗಳಲ್ಲ, ದ್ವೇಷ ಪ್ರೇಮಿಗಳು: ಸಿಎಂ ಸಿದ್ದರಾಮಯ್ಯ

ಐತಿಹಾಸಿಕ ರಾಮ ಮಂದಿರ ಪ್ರಾಣಪ್ರತಿಷ್ಠಿಗೆ ಕಾಂಗ್ರೆಸ್‌ಗೆ ಆಹ್ವಾನ ನೀಡಲಾಗಿತ್ತು. ಆದರೆ ಈ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿತ್ತು. ಪ್ರಾಣಪ್ರತಿಷ್ಠೆಯಿಂದ ದೂರ ಉಳಿದಿತ್ತು. ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರ ಪೂಜನೀಯವಲ್ಲ, ಶ್ರೀರಾಮ ಭಾರತದ ಶಕ್ತಿ. ಆದರೆ ಕಾಂಗ್ರೆಸ್ ಈ ದೇಶದ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ವಿಫಲವಾಗಿದೆ. ಧಾರ್ಮಿಕ ಭಾವನೆಗೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದು ಅರ್ಜುನ್ ಮೋದ್ವಾಡಿಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ತಿರಸ್ಕರಿಸಿದ ಕಾಂಗ್ರೆಸ್ ಮತ್ತೊಂದೆಡೆ ಮಂದಿರ ವಿಚಾರ ಮುಂದಿಟ್ಟು ಗದ್ದಲ ಸೃಷ್ಟಿಸಲು ಯತ್ನಿಸಿತ್ತು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ವಿನಾಕಾರಣ ಗದ್ದಲ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ರಾಹುಲ್ ಗಾಂಧಿ ನಡೆ, ಕಾಂಗ್ರೆಸ್ ಪಕ್ಷ ಶ್ರೀರಾಮ ಹಾಗೂ ಧಾರ್ಮಿಕ ಭಾವನೆಗೆ ಮಾಡಿದ ಅಪಮಾನದಿಂದ ಭಾರತೀಯ ನಾಗರೀಕರು, ಪಕ್ಷದ ಕಾರ್ಯಕರ್ತರು ಕೆರಳಿದ್ದಾರೆ ಎಂದು ಅರ್ಜುನ್ ಮೋದ್ವಾಡಿಯಾ ಹೇಳಿದ್ದಾರೆ.

ಕಾಂಗ್ರೆಸ್‌ಗೆ ದೇಶಕಿಂತ ದೇಶದ್ರೋಹಿಗಳೇ ಮೆಚ್ಚು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

 ಅರ್ಜುನ್ ಮೋದ್ವಾಡಿಯಾ ರಾಜೀನಾಮೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆ ತಂದಿತ್ತು. ಇದೀಗ ಅರ್ಜುನ್ ಮೋದ್ವಾಡಿಯಾ ಬೇರೆ ಪಕ್ಷಕ್ಕೆ ಸೇರಿಕೊಳ್ಳುತ್ತಾರಾ? ಅನ್ನೋ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.