Vande Mataram ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ಪಕ್ಷವೇ ಬುನಾದಿ ಹಾಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನವನ್ನು ದೇಶಕ್ಕೆ ನೀಡಿದ ಪಕ್ಷ ನಮ್ಮದು, ಬಿಜೆಪಿ ಈಗ ನಮ್ಮನ್ನು ಅನುಸರಿಸುತ್ತಿದೆ ಎಂದು ಅವರು ತಿಳಿಸಿದರು.

ದೆಹಲಿ (ಫೆ.12): ‘ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ದೇಶದ ಸೇವೆ ಮಾಡಿದ ಪಕ್ಷ ನಮ್ಮದು. ಈಗ ಬಿಜೆಪಿ, ಬೇರೆಯವರು ನಮ್ಮನ್ನು ಅನುಸರಿಸುತ್ತಿದ್ದಾರೆ. ಅದೇ ಸಂತೋಷ ನಮಗೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ರಾಷ್ಟ್ರಗೀತೆಗೆ ನೀಡುವ ಗೌರವವನ್ನು ವಂದೇ ಮಾತರಂಗೂ ನೀಡಬೇಕು ಹಾಗೂ ಇದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಕೇಳಿದಾಗ, ‘ನಮ್ಮ ಕಾರ್ಯಕ್ರಮಗಳನ್ನು ಪ್ರಾರಂಭ ಮಾಡುವಾಗ ಪ್ರತಿಹಂತದಲ್ಲೂ ವಂದೇ ಮಾತರಂ ಗೀತೆ ಹಾಡುತ್ತೇವೆ. ನಾವು ವಂದೇ ಮಾತರಂ ಗೀತೆಗೆ ಗೌರವ ನೀಡುತ್ತೇವೆ. ಅದನ್ನು ಅನುಸರಿಸುತ್ತೇವೆ’ ಎಂದು ಹೇಳಿದರು. ಈಗ ಎರಡು ರಾಷ್ಟ್ರಗೀತೆಗಳಾಗುತ್ತವೆ ಎಂದು ಕೇಳಿದಾಗ, ‘ಅದರ ಬಗ್ಗೆ ಆನಂತರ ಮಾತನಾಡೋಣ’ ಎಂದರು.

‘ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ ಹಾಡನ್ನು ರಾಜ್ಯಗೀತೆಯಾಗಿ ಕಡ್ಡಾಯ ಮಾಡಿದ್ದೇವೆ. ಅದರಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂದು ಇದೆಯಲ್ಲ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ. ಏನೇನು ಹೇಳಬೇಕು, ಯಾವ ಧರ್ಮ ಹೇಳಬೇಕು ಎಂಬುದೆಲ್ಲ ಹೇಳಿದ್ದೇವಲ್ಲ. ಹಿಂದೂ, ಕ್ರೈಸ್ತ, ಮುಸಲ್ಮಾನ ಎಂದು ಹಾಡಿನಲ್ಲಿಯೇ ಇದೆ. ಅಂತಹ ರಾಜ್ಯ, ಭೂಮಿಯಲ್ಲಿ ಬೆಳೆದವರು ನಾವು’ ಎಂದರು.

YouTube video player