ಕಾಂಗ್ರೆಸ್ ವಿರುದ್ಧ ಪಕ್ಷದ ಹಿರಿಯ ನಾಕರು ಅಸಮಾಧಾನಗೊಂಡಿರುವುದು ಇದೇ ಮೊದಲಲ್ಲ. ಹಿರಿಯ ನಾಯಕರು ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಲು ಜಿ23 ಸಭೆ ನಡೆಸಿ, ತಮ್ಮ ಪಕ್ಷಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದರು.  ಕಾಂಗ್ರೆಸ್ ಅಧಿಕಾರಕ್ಕಾಗಿ ತೀರಾ ಕೆಳಮಟ್ಟಕ್ಕೆ ಇಳಿಯಬಾರದು ಎಂಬ ಎಚ್ಚರಿಕೆ ಸಂದೇಶವನ್ನು ಹಿರಿಯ ನಾಯಕ ಆನಂದ್ ಶರ್ಮಾ ನೀಡಿದ್ದಾರೆ.  ಆನಂದ್ ಶರ್ಮಾ ಈ ಹೇಳಿಕೆಗೆ ಕಾರಣವೇನು? ಈ ಕುರಿತ ವಿವರ ಇಲ್ಲಿದೆ. 

ನವದೆಹಲಿ(ಮಾ.01): ಕಾಂಗ್ರೆಸ್ ವಿರುದ್ಧ ಪಕ್ಷದ ಹಿರಿಯ ನಾಯಕರು ಅಸಮಾಧಾನ ತೋಡಿಕೊಳ್ಳುತ್ತಲೇ ಇದ್ದಾರೆ. ಆದರೆ ಕಾಂಗ್ರೆಸ್ ಇದ್ಯಾವುದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ಇದೀಗ ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ ಟ್ವಿಟರ್ ಪೋಸ್ಟ್ ಪಕ್ಷಕ್ಕೆ ಕಪಾಳಮೋಕ್ಷ ಮಾಡಿದಂತಿದೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಮಾಡಿದ ಮೈತ್ರಿ ವಿರುದ್ಧ ಆನಂದ್ ಶರ್ಮಾ ಗುಡುಗಿದ್ದಾರೆ. ಈ ಮೂಲಕ ಮೈತ್ರಿ ಮೂಲಕ ಕಾಂಗ್ರೆಸ್ ಪಕ್ಷದ ನಡುವಿನ ಆತಂರಿಕ ಕಲಹ ತೀವ್ರಗೊಂಡಿದೆ. ಪಕ್ಷ ಇಬ್ಬಾಗವಾಗಿದೆ.

ಗಾಂಧಿ ಕುಟುಂಬದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರ ಆಕ್ರೋಶ; 23 ನಾಯಕರಿಂದ ಸಮಾವೇಶ!

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಾಗೂ ಇತರ ಎಡಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದೆ. ಸೀಟು ಹಂಚಿಕೆ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರವನ್ನು ಆನಂದ್ ಶರ್ಮಾ ಪ್ರಶ್ನಿಸಿದ್ದಾರೆ. ಈ ಕುರಿತ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಿವಿ ಹಿಂಡಿದ್ದಾರೆ. 

ಕಾಂಗ್ರೆಸ್ ಪಕ್ಷ ಐಎಸ್ಎಫ್ ಹಾಗೂ ಇತರ ಪಕ್ಷದೊಂದಿಗಿನ ಮೈತ್ರಿ ಪಕ್ಷದ ಸೈದ್ಧಾಂತಿಕ ನಿಲುವಿಗೆ ವಿರುದ್ಧವಾಗಿದೆ. ಗಾಂಧಿ ಹಾಗೂ ನೆಹರೂ ಜ್ಯಾತ್ಯಾತೀತಗೆ ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಿಕ ನಿಲುವಾಗಿದೆ. ಆದರೆ ಇವೆಲ್ಲವನ್ನೂ ಗಾಳಿಗೆ ತೂರಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂತಹ ನಿರ್ಧಾರಗಳನ್ನು ಕಾಂಗ್ರೆಸ್ ಕಾರ್ಯಕಾರಣಿ ಸಮಿತಿಯಲ್ಲಿ ಚರ್ಚಿಸಬೇಕಿತ್ತು ಎಂದು ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ.

Scroll to load tweet…

ಕೋಮುವಾದ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ಆಯ್ಕೆಯಲ್ಲ, ಎಲ್ಲಾ ಕೋಮುವಾದ ವಿರುದ್ದ ಕಾಂಗ್ರೆಸ್ ಹೋರಾಟ ಮಾಡಬೇಕು. ಆದರೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷರು ತೆಗೆದುಕೊಂಡ ನಿರ್ಧಾರ ಕಾಂಗ್ರೆಸ್ ತಲೆ ತಗ್ಗಿಸುವಂತೆ ಮಾಡಿದೆ. ಈ ಕುರಿತು ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಪಷ್ಟಪಡಿಸಬೇಕು ಎಂದು ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ.

Scroll to load tweet…