ಕೇಂದ್ರ ಮಾಜಿ ಸಚಿವ, ಪಿ ಚಿದಂಬಂರ ಆರೋಗ್ಯದಲ್ಲಿ ಏರುಪೇರಾಗಿದೆ. ಕಾರ್ಯಕ್ರಮದಲ್ಲಿರುವಾಗಲೇ ಅಸ್ವಸ್ಥಗೊಂಡ ನಾಯಕ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಚಿದಂಬರಂ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ಅಹಮ್ಮದಾಬಾದ್(ಏ.08) ಕಾಂಗ್ರೆಸ್ ನಾಯಕ ಪಿ ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಗುಜರಾತ್‌ನ ಸಬರಮತಿ ಆಶ್ರಮಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡ ಪಿ ಚಿದಂಬರಂ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾತ್ಮಾ ಗಾಂಧಿ ಸಬರಮತಿ ಆಶ್ರಮದಲ್ಲಿ ಆಯೋಜಿಸಿದ್ದ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು ಪಾಲ್ಗೊಂಡಿದ್ದರು. ಈ ವೇಳೆ ಘಟನೆ ನಡೆದಿದೆ.
ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆ ಬಳಿಕ ನಡೆದ ಪ್ರಾರ್ಥನಾ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 64 ವರ್ಷದ ಹಿರಿಯ ನಾಯಕ ಪಿ ಚಿದಂಬರಂ ಬಿಸಿನ ಬೇಗೆಯಿಂದ ಕಾರ್ಯಕ್ರಮದ ಆರಂಭದಲ್ಲೇ ಅಸ್ವಸ್ಥರಾಗಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಜ್ಞೆ ತಪ್ಪಿದ ಚಿದಂಬರಂ ಕುಸಿದು ಬಿದ್ದಿದ್ದಾರೆ.
ಘಟನೆ ಕುರಿತು ಪುತ್ರ ಕಾರ್ತಿ ಚಿದಂಬಂರ ಮಾಹಿತಿ ನೀಡಿದ್ದಾರೆ. ವಿಪರೀತ ಬಿಸಿಲಿನಿಂದ ಪಿ ಚಿದರಂಬರಂ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಂದೆ ವೈದ್ಯರ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
