ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟಿದ್ದು ಇದೀಗ ಈ ಘಟನೆ ರಾಷ್ಟ್ರಮಟ್ಟದವರೆಗೆ ಸದ್ದು ಮಾಡಿದೆ. ಈ ಘಟನೆ ಬಗ್ಗೆ ಟ್ವೀಟ್ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. 

ನವದೆಹಲಿ (ಮೇ.03): ಕೊರೋನಾ ರಣಕೇಕೆ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಸಂಭವಿಸಿದ ದುರಂತದಲ್ಲಿ ಆಕ್ಸಿಜನ್ ಕೊರತೆಯಿಂದ 24 ಮೃತಪಟ್ಟಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. 

ಚಾಮರಾಜನಗರ ಆಕ್ಸಿಜನ್ ದುರಂತ ದೆಹಲಿ ಅಂಗಳಕ್ಕೆ ತಲುಪಿದ್ದು, ಈ ಬಗ್ಗೆ ಟ್ವೀಟ್ ಮಾಡಿ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ದುರಂತದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನೆ ಮಾಡಿದ್ದಾರೆ. 

Scroll to load tweet…

ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು

ಈ ದುರಂತದಂತೆ ಮತ್ತಷ್ಟು ಜನ ಬಳಲಬೇಕು? ಮಲಗಿರುವ ವ್ಯವಸ್ಥೆ ಎದ್ದೇಳಬೇಕು ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 24 ಮಂದಿ ಮೃತಪಟ್ಟಿದ್ದು ಸಾಕಷ್ಟು ಆತಂಕವನ್ನುಂಟು ಮಾಡಿದೆ. ಆಕ್ಸಿಜನ್ ಕೊರತೆಯಿಂದ ಈ ಮಹಾ ದುರಂತ ಸಂಭವಿಸಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"