ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ದಿಡೀರ್ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ(ಫೆ.20) ಕಾಂಗ್ರೆಸ್ ಅಧಿನಾಯಕಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದರೆ. ದೆಹಲಿಯ ಗಂಗಾ ರಾಮ್ ಆಸ್ಪತ್ರೆ ದಾಖಲಾಗಿರುವ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. 78 ವರ್ಷದ ಸೋನಿಯಾ ಗಾಂಧಿ ಆರೋಗ್ಯ ಇಂದು ಕ್ಷೀಣಿಸಿತ್ತು. ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂಲಗಳ ಪ್ರಕಾರ ನಾಳೆ(ಫೆ.21) ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇಂದು(ಫೆ.20) ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ. ಸದ್ಯ ವೈದ್ಯರ ತಂಡ ಸೋನಿಯಾ ಗಾಂಧಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ದೆಹಲಿ ಗಂಗಾ ರಾಮ್ ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯ ಡಾ. ಅಜಯ್ ಸ್ವರೂಪ್ ಈ ಕುರಿತು ಮಾಹಿತಿ ನೀಡಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಾಗಿದೆ. ಸೋನಿಯಾ ಗಾಂಧಿ ವೈದ್ಯರ ನಿಗಾದಲ್ಲಿದ್ದಾರೆ. ಸದ್ಯ ಸೋನಿಯಾ ಗಾಂಧಿ ಚೇತರಿಸಿಕೊಳ್ಳುತ್ತಿದ್ದು, ಶುಕ್ರವಾರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಯಾರು ಆತಂಕಪಡುವ ಅಗತ್ಯವಿಲ್ಲ. ಹೊಟ್ಟೆ ನೋವಿನ ಕಾರಣ ಕಾಂಗ್ರೆಸ್ ನಾಯಕಿ ಆಸ್ಪತ್ರೆ ದಾಖಲಾಗಿದ್ದಾರೆ ಎಂದು ಡಾ. ಅಜಯ್ ಸ್ವರೂಪ್ ಹೇಳಿದ್ದಾರೆ.