ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಗ್ಯ ಕೊಂಚ ಏರುಪೇರಾಗಿದೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಸೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ನವದೆಹಲಿ(ಮಾ.03): ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿಯನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಆಸ್ಪತ್ರೆ ವೈದ್ಯರ ತಂಡ ಹೇಳಿದೆ. ಸೋನಿಯಾ ಗಾಂಧಿ ಆಸ್ವಸ್ಥಗೊಂಡ ಕಾರಣ ನಿನ್ನೆ(ಮಾ.02) ಆಸ್ಪತ್ರೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿ ಚಿಕಿಕ್ಸೆಯನ್ನು ನುರಿತ ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿದೆ. ಸದ್ಯ ವೈದ್ಯರ ನಿಗಾದಲ್ಲಿರುವ ಗಾಂಧಿ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಜ್ವರ, ಕೆಮ್ಮು ಕಾಣಿಸಿಕೊಂಡಿರುವ ಕಾರಣ ಸೋನಿಯಾ ಗಾಂಧಿ ಅವರನ್ನು ನಿನ್ನೆ ರಾತ್ರಿ ಗಂಗಾ ರಾಮ್ ಆಸ್ಪತ್ರೆಯಲ್ಲಿ ವೈದ್ಯರು ತಪಾಸಣೆ ನಡೆಸಿದ್ದಾರೆ. ಈ ವೇಳೆ ತ್ವರಿತಗತಿಯಲ್ಲಿ ಆರೋಗ್ಯ ಸುಧಾರಿಸಿಕೊಳ್ಳುವ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 71 ವರ್ಷದ ಸೋನಿಯಾ ಗಾಂಧಿ ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
2024ರಲ್ಲೂ ಮೋದಿ ವಿರುದ್ಧ ಕಾಂಗ್ರೆಸ್ ಮೈತ್ರಿ ರಚನೆ: ಖರ್ಗೆ; ಸೋನಿಯಾ ರಾಜಕೀಯ ವಿದಾಯ..?
ಈ ವರ್ಷದಲ್ಲಿ ಸೋನಿಯಾ ಗಾಂಧಿ ಎರಡನೇ ಬಾರಿಗೆ ಆಸ್ಪತ್ರೆ ದಾಖಲಾಗುತ್ತಿದ್ದಾರೆ. 2023ರ ಜನವರಿ ತಿಂಗಳಲ್ಲಿ ಸೋನಿಯಾ ಗಾಂಧಿ ಶಾಸಕೋಶ ಸೋಂಕಿನಿಂದ ಬಳಲಿದ್ದರು.ಹೀಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಚಿಕಿತ್ಸೆ ಬಳಕ ಸೋನಿಯಾ ಗಾಂಧಿ ಸುಧಾರಿಸಿಕೊಂಡಿದ್ದರು. ಇದಕ್ಕೂ ಮೊದಲು ಸೋನಿಯಾ ಗಾಂಧಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆ ದಾಖಲಾಗಿದ್ದರು.
ಸತತ ಆರೋಗ್ಯ ಸಮಸ್ಯೆ, ವಯಸ್ಸು ಸೇರಿದಂತೆ ಹಲವು ಕಾರಣಗಳಿಂದ ಸೋನಿಯಾ ಗಾಂಧಿ ಇತ್ತೀಚೆಗೆ ಛತ್ತೀಸ್‌ಗಢದ ನಯಾ ರಾಯಪುರದಲ್ಲಿ ನಡೆದ ಪಕ್ಷದ 85ನೇ ಮಹಾಧಿವೇಶನದಲ್ಲಿ ನಿವೃತ್ತಿ ಸುಳಿವು ನೀಡಿದ್ದರು. ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಮನಮೋಹನಸಿಂಗ್ ಅವರ ಸಮರ್ಥ ನಾಯಕತ್ವ ನನಗೆ ವೈಯಕ್ತಿಕ ತೃಪ್ತಿ ನೀಡಿದೆ. ನನಗೆ ಹೆಚ್ಚು ತೃಪ್ತಿ ನೀಡುವ ಸಂಗತಿ ಯಾವುದೆಂದರೆ, ಕಾಂಗ್ರೆಸ್ಸಿಗೆ ಮಹತ್ತರ ತಿರುವಿನಂತಾಗಿರುವ ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್‌್ಸ ಮುಕ್ತಾಯಗೊಳ್ಳಬಹುದು ಎಂಬ ಸಂಗತಿ ಎಂದಿದ್ದರು.
ಸೋನಿಯಾ ಅವರು ಕಾಂಗ್ರೆಸ್ಸಿಗೆ ನೀಡಿದ ಕೊಡುಗೆಗಳನ್ನು ಕಾರ್ಯಕ್ರಮದಲ್ಲಿ ವಿಡಿಯೋ ಮೂಲಕ ಬಿತ್ತರಿಸಲಾಯಿತು. ಅದನ್ನು ಪ್ರಸ್ತಾಪಿಸಿ ಮಾತನಾಡಿದ ಅವರು, ಈ ವಿಡಿಯೋ ನನಗೆ ಎಷ್ಟುವಯಸ್ಸಾಗಿ ಬಿಟ್ಟಿದೆ ಎಂಬುದನ್ನು ತೋರಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಮುನ್ನಡೆಯಬೇಕು ಎಂದು ಸೋನಿಯಾ ಗಾಂಧಿ ಸೂಚಿಸಿದ್ದರು.
ಸಿಡಬ್ಲ್ಯುಸಿಗೆ ಸದಸ್ಯರ ನೇಮಕದ ಪರಮಾಧಿಕಾರ ಖರ್ಗೆ ಹೆಗಲಿಗೆ: ಸೋನಿಯಾ, ರಾಹುಲ್‌ಗೆ ಕಾಯಂ ಸದಸ್ಯತ್ವ
ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ದೆಹಲಿ ಪ್ರವೇಶಿಸುತ್ತಿದ್ದಂತೆ ಸೋನಿಯಾ ಗಾಂಧಿ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಉತ್ಸಾಹದಿಂದ ಸೋನಿಯಾ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು. ಇನ್ನು ಪಾದಯಾತ್ರೆಯ ವೇಳೆ ತನ್ನ ತಾಯಿ ಸೋನಿಯಾ ಗಾಂಧಿ ಜೊತೆ ಇರುವ ಫೋಟೊವನ್ನು ಹಂಚಿಕೊಂಡ ರಾಹುಲ್ ಗಾಂಧಿ, ‘ನಾನು ತಾಯಿಯಿಂದ ಪಡೆದುಕೊಂಡಿರುವ ಪ್ರೀತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ’ ಎಂದಿದ್ದರು.
