79ರ ಹರೆಯದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆ ದಾಖಲಾಗಿದ್ದಾರೆ. ಮೇದಾಂತ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ ಮುಂದುವರಿದಿದೆ. ಸೋನಿಯಾ ಗಾಂಧಿ ಆರೋಗ್ಯ ಅಪ್‌ಡೇಟ್ ಇಲ್ಲಿದೆ. 

ಹರ್ಯಾಣ (ಮೇ.13) ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹರ್ಯಾಣದ ಮೇದಾಂತ ಆಸ್ಪತ್ರೆ ದಾಖಲಾಗಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆ ದಾಖಲಾಗಿದ್ದಾರೆ. ಮೇದಾಂತ ಆಸ್ಪತ್ರೆ ವೈದ್ಯರ ತಂಡ ಸೋನಿಯಾ ಗಾಂಧಿಗೆ ಶಸ್ತ್ರಚಿಕಿತ್ಸೆ ನಡೆಸಲಿದೆ. ಹರ್ಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ ಮುಂದುವರಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದೆರಡು ವರ್ಷದಿಂದ ಆರೋಗ್ಯ ಸಮಸ್ಯೆ

ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಕಳೆದೆರಡು ವರ್ಷದಿಂದ ಸತತವಾಗಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ದೆಹಲಿ ಸೇರಿದಂತೆ ಕೆಲ ಭಾಗದಲ್ಲಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ ಸೋನಿಯಾ ಗಾಂಧಿ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಗಂಗಾ ರಾಮ್ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಬ್ಬರು ಆಸ್ಪತ್ರೆಯಲ್ಲಿ ತಾಯಿ ಆರೈಕೆ ಮಾಡಿದ್ದರು.

ಜನವರಿ ತಿಂಗಳಲ್ಲಿ ಸಣ್ಣ ಪ್ರಮಾಣದ ಬ್ರೊಂಕೈಲ್ ಅಸ್ತಮಾ ಸಮಸ್ಯೆಯಿಂದ ಬಳಲಿದ್ದರು. ದೆಹಲಿಯ ವಿಪರೀತ ವಾಯುಲಮಾಲಿನ್ಯ ಸಮಸ್ಯೆಯಿಂದ ಸೋನಿಯಾ ಗಾಂಧಿ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಈ ವೇಳೆ ದೆಹಲಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

2025ರಲ್ಲಿ ಮೂರು ಬಾರಿ ಆಸ್ಪತ್ರೆ ದಾಖಲು

2025ರಲ್ಲಿ ಸೋನಿಯಾ ಗಾಂಧಿ ಹಲವು ಬಾರಿ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ಈ ಪೈಕಿ ಮೂರು ಬಾರಿ ಆಸ್ಪತ್ರೆ ದಾಖಲಾಗಿದ್ದರು. ಒಂದು ಬಾರಿ ಹೊಟ್ಟೆ ನೋವಿನ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿದ್ದರು. ದೆಹಲಿ ಹಾಗೂ ಶಿಮ್ಲಾದಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಪಡೆದಿದ್ದರು.

ಐದೂ ಬಾರಿ ಲೋಕಸಭಾ ಸಂಸದೆಯಾಗಿ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಕಳೆದ ಚುನಾವಣೆಯಲ್ಲಿ ಆರೋಗ್ಯ ಹಾಗೂ ವಯಸ್ಸಿನ ಕಾರಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಬಳಿಕ ರಾಜ್ಯಸಭೆ ಮೂಲಕ ಸಂಸದರಾಗಿದ್ದರು.