Asianet Suvarna News Asianet Suvarna News

ಕಾಂಗ್ರೆಸ್‌ಗೆ ಗುಡ್‌ಬೈ ಎಂದ ಸುಶ್ಮಿತಾ ದೇವ್: ಟಿಎಂಸಿಗೆ ಸೇರ್ಪಡೆ?

* ಕಾಂಗ್ರೆಸ್‌ಗೆ ಸುಶ್ಮಿತಾ ದೇವ್ ಗುಡ್‌ಬೈ

* ಟಿಎಂಸಿಗೆ ಸೇರ್ಪಡೆಯಾಗ್ತಾರಾ ಸುಶ್ಮಿತಾ

* ದೀದೀ ಭೇಟಿಯಾಗಲು ಪಶ್ಚಿಮ ಬಂಗಾಳಕ್ಕೆ ತೆರಳಿದ ಸುಶ್ಮಿತಾ

Congress leader Sushmita Dev quits party likely to join Trinamool Congress today in Kolkata pod
Author
Bangalore, First Published Aug 16, 2021, 1:39 PM IST
  • Facebook
  • Twitter
  • Whatsapp

ಕೋಲ್ಕತ್ತಾ(ಆ.16): ಸೋಮವಾರ ಕಾಂಗ್ರೆಸ್ ಪಕ್ಷ ತೊರೆದಿರುವ ಸುಶ್ಮಿತಾ ದೇವ್ ತೃಣಮೂಲ ಕಾಂಗ್ರೆಸ್ ಸೇರಲಿದ್ದ, ಅಸ್ಸಾಂನಲ್ಲಿ ಪಕ್ಷದ ನಾಯಕಿಯಾಗಿ ಗುರುತಿಸಿಕೊಳ್ಳಲಿದ್ದಾರೆ. ಸುಶ್ಮಿತಾ ಇಂದು, ಸೋನವಾರ ಟಿಎಂಸಿಗೆ ಸೇರುತ್ತಾರೆನ್ನಲಾಗಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಲು ಕೋಲ್ಕತ್ತಾಗೆ ತೆರಳಿದ್ದಾರೆ. ಟಿಎಂಸಿ ಮೂಲಗಳಿಂದ ಲಭ್ಯವಾದ ಮಾಹಿತಿ ಅನ್ವಯ 'ಸುಶ್ಮಿತಾರವರು ಪಕ್ಷಕ್ಕೆ ಸೇರ್ಪಡೆಯಾದರೆ, ಅಸ್ಸಾಂನಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ನಾಯಕಿಯಾಗಿ ಗುರುತಿಸಿಕೊಳ್ಳಲಿದ್ದಾರೆ' ಎನ್ನಲಾಗಿದೆ. ಸುಶ್ಮಿತಾ ಅವರು ಅಸ್ಸಾಂನ ಸಿಲ್ಚಾರ್‌ನಿಂದ ಕಾಂಗ್ರೆಸ್ ಸಂಸದೆ ಆಗಿದ್ದರು, ಅವರ ತಂದೆಯೂ ಈ ಹಿಂದೆ ಈ ಕ್ಷೇತ್ರದಲ್ಲಿ ಭಾರೀ ಪ್ರಾಬಲ್ಯ ಹೊಂದಿದ್ದರು ಎಂಬುವುದು ಉಲ್ಲೇಖನೀಯ.

ಕಾಂಗ್ರೆಸ್ ನ ಮಾಜಿ ಸಂಸದೆ ಸುಶ್ಮಿತಾ ದೇವ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪಕ್ಷ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮಹಾ ಮೈತ್ರಿಕೂಟವನ್ನು ರಚಿಸುವ ಮೂಲಕ ಚುನಾವಣೆಗಳಲ್ಲಿ ಸೆಣಸಾಡಿತ್ತು. ಹೀಗಿದ್ದರೂ ಪಕ್ಷಕ್ಕೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಇನ್ನು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಸುಶ್ಮಿತಾ ದೇವ್, ಪಕ್ಷಕ್ಕೆ ಸಂಬಂಧಿಸಿದ ವಾಟ್ಸಾಪ್ ಗುಂಪನ್ನು ತೊರೆದಿದ್ದಾರೆ.

ಕಾಂಗ್ರೆಸ್ ನ ಮಾಜಿ ಸಂಸದೆ ಸುಶ್ಮಿತಾ ದೇವ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪಕ್ಷ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮಹಾ ಮೈತ್ರಿಕೂಟವನ್ನು ರಚಿಸುವ ಮೂಲಕ ಚುನಾವಣೆಗಳಲ್ಲಿ ಹೋರಾಡಿತು, ಆದರೆ ಪಕ್ಷವು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಸುಷ್ಮಿತಾ ದೇವ್ ಅವರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು. ಅವರು ಪಕ್ಷಕ್ಕೆ ಸಂಬಂಧಿಸಿದ ವಾಟ್ಸಾಪ್ ಗುಂಪನ್ನು ತೊರೆದಿದ್ದಾರೆ.

ಇನ್ನು ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾದ ಮತ್ತು ಕೊಲೆಗೀಡಾದ 9 ವರ್ಷದ ಬಾಲಕಿಯ ಪೋಷಕರ ಫೋಟೋಗಳನ್ನು ಶೇರ್ ಮಾಡಿದ ನಾಯಕರಲ್ಲಿ ಸುಶ್ಮಿತಾ ಕೂಡಾಲ್ಲಿ ಒಬ್ಬರಾಗಿದ್ದರು. ಹುಡುಗಿಯ ಕುಟುಂಬವನ್ನು ಭೇಟಿ ಮಾಡಿದ ನಂತರ ಈ ಚಿತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಂಚಿಕೊಂಡಿದ್ದರು. ಬಳಿಕ ಅನೇಕ ಮಂದಿ ಈ ಫೋಟೋವನ್ನು ಟ್ವೀಟ್ ಮಾಡಿದ್ದರು. ಆದರೆ ರಾಹುಲ್ ಗಾಂಧಿಯವರ ಖಾತೆಯನ್ನು ಲಾಕ್ ಮಾಡಿದ ತಕ್ಷಣ, ಸುಶ್ಮಿತಾ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ತಮ್ಮ ಪ್ರೊಫೈಲ್ ಫೋಟೋ ಬದಲಾಯಿಸಿ ಮಾಜಿ ಕಾಂಗ್ರೆಸ್ ಅಧ್ಯಕ್ಷರ (ರಾಹುಲ್ ಗಾಂಧಿ) ಫೋಟೋವನ್ನು ಒಗ್ಗಟ್ಟನ್ನು ಪ್ರದರ್ಶಿಸಿದ್ದರು. ಕಳೆದ ವಾರ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲಾಗಿದೆ. 

Follow Us:
Download App:
  • android
  • ios