ವಿಧಾನಸಭೆ ಚುನಾವಣೆಗೆ 42 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್, ಅಧಿಕಾರಕ್ಕೇರಲೇಬೇಕು ಎಂದು ಪಣತೊಟ್ಟಿರುವ ಅಸ್ಸಾಂ ಕಾಂಗ್ರೆಸ್ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಗುವ್ಹಾಟಿ (ಮಾ.03) ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅಸ್ಸಾಂ ಸೇರಿದಂತೆ ಕೆಲ ರಾಜ್ಯಗಳ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗಲಿದೆ. ಇದರ ಬೆನ್ನಲ್ಲೇ ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 42 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದೆ. ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೋಗೋಯ್ ಜೋಹ್ರತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಜೆಪಿ ಸರ್ಕಾರ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದೆ. ಆದರೆ ಬಿಜೆಪಿಗಿಂತ ಮೊದಲು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿ ಕರ್ನಾಟಕ ರಣತಂತ್ರ ಪ್ರಯೋಗಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕದ ರಣತಂತ್ರ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ವ್ಯವಸ್ಥಿತವಾಗಿ ಪ್ಲಾನ್ ಮಾಡಲಾಗಿತ್ತು. ಎಲ್ಲರಗಿಂತ ಮೊದಲು ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿತ್ತು. ಬಳಿಕ ಟಿಕೆಟ್ ಸಿಕ್ಕ ಅಭ್ಯರ್ಥಿಗಳು ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುಲು ಅನುಕೂಲ ಮಾಡಿಕೊಡಲಾಗಿತ್ತು. ಹೀಗಾಗಿ ಕರ್ನಾಟಕದಲ್ಲಿ ಅಭೂತೂರ್ವ ಗೆಲುವಿನೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಿತ್ತು. ಇದೇ ರಣತಂತ್ರವನ್ನು ಅಸ್ಸಾಂ ಕಾಂಗ್ರೆಸ್ ಕೂಡ ಅನುಸರಿಸಿದೆ.

ಅಸ್ಸಾಂನಲ್ಲಿ ಕಾಂಗ್ರೆಸ್ ಅದಿಕಾರಕ್ಕೇರಲು ತೀವ್ರ ಪ್ರಯತ್ನ ನಡೆಸುತ್ತಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹಾಗೂ ಗೌರವ್ ಗೋಗೋಯ್ ನುಡುವಿನ ಸಮರ ತೀವ್ರ ಸ್ಪರೂಪ ಪಡೆದುಕೊಂಡಿದೆ. ಗೌರವ್ ಗೋಗೋಯ್‌ಗೆ ಪಾಕಿಸ್ತಾನದ ನಂಟಿದೆ ಅನ್ನೋ ಗಂಭೀರ ಆರೋಪ ಮಾಡಿರುವ ಹಿಮಂತ ಬಿಸ್ವ ಶರ್ಮಾ, ಅಸ್ಸಾಂನ ಪ್ರಮುಖ ಹಿಂದೂ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಮದರಸಾ ಮುಚ್ಚುವಿಕೆ, ಬಹುಪತ್ನಿತ್ವಕ್ಕೆ ಅಂತ್ಯ ಸೇರಿದಂತೆ ಹಲವು ಕ್ರಾಂತಿಕಾರಿ ನಿರ್ಧಾರಗಳನ್ನು ಹಿಮಂತ ಬಿಸ್ವಾ ಶರ್ಮಾ ತೆಗೆದುಕೊಂಡಿದ್ದಾರೆ. ಈ ಮೂಲಕ ಹಿಮಂತ ಬಿಸ್ವಾ ಶರ್ಮಾ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಅಸ್ಸಾಂನಲ್ಲಿ ಅಧಿಕಾರಕ್ಕೇರಲು ಶತಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಇದೀಗ ಹೊಸ ರಣತಂತ್ರ ಹೆಣೆದಿದೆ.

ಅಸ್ಸಾಂ ಚುನಾವಣೆ

ಅಸ್ಸಾಂ ವಿಧಾನಸಭೆ ಚುನಾವಣೆ ಮಾರ್ಚ್ ಅಂತ್ಯ ಅಥವಾ ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ.