ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಿಎಂ ರೇಸ್‌ನಲ್ಲಿದ್ದವು.

ತಿರುವನಂತರಪುರ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಸಿ.ವೇಣುಗೋಪಾಲ್ ಅವರ ಹೆಸರು ಸಿಎಂ ಸ್ಥಾನಕ್ಕೆ ಕೇಳಿ ಬಂದಿತ್ತು. ಅಂತಿಮವಾಗಿ ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದ ವಿ.ಡಿ.ಸತೀಶನ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದಿದೆ. 

ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ಕೆ.ಸಿ.ವೇಣುಗೋಪಾಲ್ ಪಕ್ಷದ ಪ್ರಭಾವಿ ನಾಯಕರಾಗಿದ್ದರು. ಹಾಗಾಗಿಯೇ ಆಯ್ಕೆಯಾದ ಕೇರಳ ಕಾಂಗ್ರೆಸ್ ಶಾಸಕರು, ಕೆ.ಸಿ.ವೇಣುಗೋಪಾಲ್ ಅವರಿಗೆ ಬೆಂಬಲ ಸೂಚಿಸಿದ್ದರು. ಆದ್ರೆ ವಿ.ಡಿ.ಸತೀಶನ್ ಕೇರಳದ ಜನಪ್ರಿಯ ನಾಯಕರಾಗಿದ್ದು, ಸ್ಥಳೀಯವಾಗಿ ಪ್ರಭಾವಿ ನಾಯಕರಾಗಿದ್ದಾರೆ.

Scroll to load tweet…

ಚುನಾವಣಾ ಫಲಿತಾಂಶದ ನಂತರ, 'ಮುಖ್ಯಮಂತ್ರಿ ಯಾರು?' ಎಂಬ ಪ್ರಶ್ನೆ ಕೇರಳ ರಾಜಕೀಯದಲ್ಲಿ ಪ್ರಮುಖ ಚರ್ಚೆಯಾಗಿತ್ತು. 11 ದಿನಗಳ ಅನಿಶ್ಚಿತತೆಯ ನಂತರ, ಹೈಕಮಾಂಡ್ ಚರ್ಚೆಗಳಿಗೆ ಅಂತ್ಯ ಹಾಡಿದೆ. ಅಂತಿಮ ಹಂತದ ಚರ್ಚೆಗಳಲ್ಲಿ ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಹ ಸಕ್ರಿಯವಾಗಿದ್ದರೂ, ಚುನಾವಣೆಯಲ್ಲಿ ಸತೀಶನ್ ಅವರು ಯುಡಿಎಫ್‌ನ ಮುಖವಾಗಿದ್ದರು.