BJP ಬಿರುಗಾಳಿಗೆ ಬೆದರಿದ ಕಾಂಗ್ರೆಸ್; ದೀದಿಗೆ ಸಿಎಂ ಪಟ್ಟ, 22 ಷರತ್ತಿನ ಒಪ್ಪಂದಕ್ಕೆ ಯತ್ನ!

ಬಿಜೆಪಿ ಘಟಾನುಘಟಿ ನಾಯಕರು ಬಂಗಾಳದಲ್ಲಿ ಕಮಲ ಅರಳಿಸುವ ಪ್ರಯತ್ನದಲ್ಲಿದ್ದಾರೆ. ಇದರ ನಡುವೆ ಪಶ್ಚಿಮ ಬಂಗಾಳ ಚುನಾವಣೆಗೆ ಬಹುದೊಡ್ಡ  ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ. ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಜೊತೆ ಒಪ್ಪಂದಕ್ಕೆ ಕಾಂಗ್ರೆಸ್ ಮುಂದಾಗಿದೆ. ಈ ಮೂಲಕ ಬಿಜೆಪಿಯನ್ನು ದೂರವಿಡಲು ಮಾತುಕತೆ ನಡೆದಿದೆ.

Congress offers support CM Mamata to tackle BJP but only if she withdrew 22 TMC candidates ckm

ಕೋಲ್ಕತಾ(ಎ.05):  ಪಂಚ ರಾಜ್ಯ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ ಕದನ ಕಣ ರಣರೋಚಕವಾಗಿದೆ. ಮೊದಲ ಮತದಾನ ಶಾಂತವಾಗಿದ್ದರೂ, ಎರಡನೇ ಹಂತದ ಮತದಾನದಲ್ಲಿ ಹಿಂಸೆ ಭುಗಿಲೆದ್ದಿದೆ. ಅಧಿಕಾರ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಯತ್ನಿಸಿದ್ದರೆ, ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೇರುವ ಪ್ರಯತ್ನದಲ್ಲಿದೆ. ಇಬ್ಬರ ಜಗಳ ಮೂರನೇಯವರಿಗೆ ಲಾಭ ಅನ್ನೋ ರೀತಿ ಕಾಂಗ್ರೆಸ್ ಸದ್ದಿಲ್ಲದೆ ಗೇಮ್ ಪ್ಲಾನ್ ರೂಪಿಸಿ ಮಮತಾ ಬ್ಯಾನರ್ಜಿ ಮುಂದಿಟ್ಟಿದೆ.

ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ, ಬರ್ಹಾಂಪೋರ್ ಸಂಸದ ಅಧೀರ್ ರಂಜನ್ ಚೌಧರಿ, ಹೊಸ ಪ್ಲಾನ್ ಮಾಡಿದ್ದಾರೆ. ಬಂಗಾಳದಲ್ಲಿ ಈಗಾಗಲೇ ಅಸ್ಥಿತ್ವ ಕಳೆದುಕೊಳ್ಳುತ್ತಿದ್ದ ಕಾಂಗ್ರೆಸ್‌‌ ಎಡಪಕ್ಷಗಳ ಜೊತೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ. ಇದರ ರೂವಾರಿ ಅಧೀರ್ ರಂಜನ್ ಚೌಧರಿ, ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರವೇಶವನ್ನು ತಡೆಯಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಜೊತೆ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ಕಾಂಗ್ರೆಸ್ ಯಾವ ನಿರ್ದಿಷ್ಠ ಖಾತೆಯನ್ನು ಕೇಳುವುದಿಲ್ಲ. ಬದಲಾಗಿ ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿನ ಒಟ್ಟು 22 ಟಿಎಂಸಿ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹಿಂದೆ ಸರಿಸಬೇಕು ಎಂಬ ಷರತ್ತನ್ನು ಮಮತಾ ಬ್ಯಾನರ್ಜಿ ಮುಂದೆ ಇಟ್ಟಿದೆ.

ಟಿಎಂಸಿ ಅಭ್ಯರ್ಥಿಗಳಿಂದ ಅಲ್ಪಸಂಖ್ಯಾತ ಮತಗಳು ವಿಭಜನೆಯಾಗಲಿದೆ. ಹೀಗಾದಲ್ಲೇ 22 ಕ್ಷೇತ್ರಗಳಲ್ಲಿ ಬಿಜೆಪಿ ಲಾಭ ಪಡೆಯಲಿದೆ. ಹೀೀಗಾಗಿ ಈ ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳನ್ನು ಹಿಂಪಡೆದರೆ, ಕಾಂಗ್ರೆಸ್ ಗೆಲುವು ನಿಶ್ಟಿತ. ಇಷ್ಟೇ ಅಲ್ಲ ಮಮತಾ ಬ್ಯಾನರ್ಜಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ನಂದೀಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಸೋಲಿನ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಮಮತಾ ಬ್ಯಾನರ್ಜಿ ಎಡಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಹೋರಾಡಬೇಕು. ಇದಕ್ಕೆ ಬೆಂಬಲ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬಳಿಕ ಇದೀಗ ಅಧೀರ್ ರಂಜನ್ ಚೌಧರಿ, ಈ ಒಪ್ಪಂದ ಪ್ರಸ್ತಾಪವನ್ನು ಮಮತಾ ಬ್ಯಾನರ್ಜಿ ಮುಂದಿಟ್ಟಿದ್ದಾರೆ.

Latest Videos
Follow Us:
Download App:
  • android
  • ios