ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಭಾರಿ ಪ್ರತಿಭಟನೆ ಪ್ಲಾನ್!
- ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ನೋಟಿಸ್
- ಕೊರೋನಾ ಕಾರಣ ವಿಚಾರಣೆ ಮುಂದೂಡಿದ್ದ ಜಾರಿ ನಿರ್ದೇಶನಾಲಯ
- ವಿಚಾರಣೆ ದಿನ ದೇಶಾದ್ಯಂತ ಭಾರಿ ಪ್ರತಿಭಟನೆಗೆ ಸೂಚನೆ
ನವದೆಹಲಿ(ಜು.14): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ. ಕಾಂಗ್ರೆಸ್ ನಾಯಕ ನಾಯಕ ರಾಹುಲ್ ಗಾಂಧಿಯನ್ನು ಸತತ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ ಇದೀಗ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆಗೆ ಸಜ್ಜಾಗಿದೆ. ಇದಕ್ಕಾಗಿ ಜುಲೈ 21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಇದೀಗ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದೆ. ರಾಹುಲ್ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಅದೇ ರೀತಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆಗೆ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಸದ್ಯ ಜುಲೈ 21 ರಂದು ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದೆ. ಆದರೆ ವಿಚಾರಣೆ ಮುಂದುವರಿದರೆ ಪ್ರತಿಭಟನೆಯನ್ನೂ ಮುಂದುವರಿಸಲು ಕಾಂಗ್ರೆಸ್ ನಿರ್ಧರಿಸಿದೆ. ತೀವ್ರ ಪ್ರತಿಭಟನೆ ಮೂಲಕ ಇಡಿ ಹಾಗೂ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಪ್ಲಾನ್ ಹಾಕಿಕೊಂಡಿದೆ. ಈ ಮೂಲಕ ದೇಶದಲ್ಲಿ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನಗೆ ಬೇಕಾದ ರೀತಿ ಬಳಸಿಕೊಳ್ಳುತ್ತಿದೆ ಅನ್ನೋ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಲು ಕಾಂಗ್ರೆಸ್ ಪ್ಲಾನ್ ಹಾಕಿಕೊಂಡಿದೆ.
ಇಡಿ ಸಮನ್ಸ್ ಹಾಗೂ ಪ್ರತಿಭಟನೆ ಕುರಿತು ಕಾಂಗ್ರೆಸ್(indian national congress) ಬುಧವಾರ(ಜು.13) ಮಹತ್ವದ ಸಭೆ ನಡೆಸಿದೆ. ಎಲ್ಲಾ ರಾಜ್ಯಗಳಲ್ಲಿ, ಪ್ರಮುಖ ನಗರಗಳಲ್ಲಿ ಪ್ರತಿಭಟನೆಗೆ(Congress Protest) ಸೂಚನೆ ನೀಡಲಾಗಿದೆ. ಎಲ್ಲಾ ರಾಜ್ಯದ ಕಾಂಗ್ರೆಸ್ ರಾಜ್ಯ ಅಧ್ಯಕ್ಷರು, ಮುಖ್ಯಕಾರ್ಯದರ್ಶಿ ಹಾಗೂ ಪ್ರಮುಖ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಭಾರತ್ ಜೋಡೋ ಯಾತ್ರ(bharat jodo yatra) ಆಂದೋಲನದ ಕುರಿತು ಚರ್ಚಿಸಲು ಸಭೆ ಸೇರಲಾಗಿತ್ತು. ಈ ಸಭೆಯಲ್ಲಿ ಇಡಿ(enforcement directorate) ಸಮನ್ಸ್ ಕುರಿತು ಚರ್ಚೆ ನಡೆಸಲಾಗಿದೆ. ಮುಂದಿನ ಕಾರ್ಯತಂತ್ರಗಳ ಕುರಿತು ಮಾಹಿತಿಗಳನ್ನು ಕಲೆ ಹಾಕಿ ರೂಪುರೇಷೆ ತಯಾರಿಸಲಾಗಿದೆ.
'ರಾಹುಲ್ ಗಾಂಧಿಗೆ ವಿನಾಕಾರಣ ಕಿರುಕುಳ, ಬಿಜೆಪಿಯವ್ರ ವಿರುದ್ಧ ತನಿಖೆ ಯಾಕಿಲ್ಲ?'
ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಬೆದರಿಕೆ ತಂತ್ರಕ್ಕೆ ಸೋನಿಯಾ ಗಾಂಧಿ ಹೆದರುವುದಿಲ್ಲ. ಇಂತಹ ಹಲವು ಸವಾಲುಗಳನ್ನು ಸೋನಿಯಾ ಗಾಂಧಿ ಎದರುಸಿದ್ದಾರೆ. ಜುಲೈ 21ಕ್ಕೆ ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರಾಗಲಿದ್ದಾರೆ ಎಂದಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಜೂ.23ರಂದು ಇ.ಡಿ. ಸೋನಿಯಾ ಅವರಿಗೆ 2ನೇ ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಕಾಂಗ್ರೆಸ್ ಅಧ್ಯಕ್ಷೆ ಕೋವಿಡ್ ಸೋಂಕು ಕಾಣಿಸಿಕೊಂಡು ಆಸ್ಪತ್ರೆ ದಾಖಲಾಗಿದ್ದರು. ಅನಾರೋಗ್ಯ ಕಾರಣ ವಿಚಾರಣೆಯನ್ನು ಮುಂದೂಡುವಂತೆ ಸೋನಿಯಾ ಇಡೀಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ಇ.ಡಿ. ಈಗ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ಸಮನ್ಸ್ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಅವರಿಗೆ ಮೊದಲ ಬಾರಿಗೆ ಜೂ.8ರಂದು ಸಮನ್ಸ್ ನೀಡಲಾಗಿತ್ತು. ಇದಾದ ನಂತರ ಸೋನಿಯಾ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಕಾರಣ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು 50 ಗಂಟೆಗಳಿಗೂ ಅಧಿಕ ಕಾಲ ಇ.ಡಿ. ವಿಚಾರಣೆ ನಡೆಸಿದೆ.
ರಾಹುಲ್ ವಿಚಾರಣೆಗೆ ಪ್ರತಿಭಟನೆ, ಪೊಲೀಸರ ಮೇಲೆ ಉಗುಳಿದ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ!
ಇದೇ ನ್ಯಾಷನಲ್ ಹೆರಾಲ್ಡ್(National Heralad Case) ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಈಗಾಗಲೇ ರಾಹುಲ್ ಗಾಂಧಿಯನ್ನು(Congress Leader) ವಿಚಾರಣೆ ನಡೆಸಿದೆ. ಸತತ 5 ದಿನಗಳ ಕಾಲ ಇಡಿ ವಿಚಾರಣೆ ನಡೆಸಿತ್ತು. ಈ ವೇಳೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ದೆಹಲಿ ಪ್ರತಿಭಟನೆ ವೇಳೆ ಭಾರಿ ಹೈಡ್ರಾಮ ನಡೆದಿತ್ತು. ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಘಟನೆ ಭಾರಿ ವಿವಾದಕ್ಕೂ ಕಾರಣಾಗಿತ್ತು. ಕಾಂಗ್ರೆಸ್ ನಾಯಕರನ್ನು ಎಳೆದೊಯ್ದಿದ್ದಾರೆ. ಹಲ್ಲೆಗಳಾಗಿವೆ. ಘರ್ಷಣೆಗಳು ಸಂಭವಿಸಿದೆ. ದೆಹಲಿ ಪೊಲೀಸರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಜ್ಞೆಯಂತೆ ನಡೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.