ನವದೆಹಲಿ(ನ.25): ಮಹಾರಾಷ್ಟ್ರ ರಾಜಕೀಯ ಕೆಸರೆರಚಾಟ ಸಂಸತ್ತು ತಲುಪಿದ್ದು, ಬಿಜೆಪಿ ಕಳ್ಳದಾರಿಯಿಂದ ಅಧಿಕಾರ ಪಡೆದಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಹರಿಹಾಯ್ದಿದೆ.

ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಸಂಸದರು, ಬಿಜೆಪಿ ಸಂವಿಧಾನದ ಮೇಲೆ ಗದಾಪ್ರಹಾರ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

'ಮಹಾ' ರಾಜಕೀಯದಲ್ಲಿ ರೋಚಕ ತಿರುವು: 'ಸೇನೆ'ಗೆ ಶಾಕ್, ಫಡ್ನವೀಸ್ ಮತ್ತೆ ಸಿಎಂ!

ಇದಕ್ಕೂ ಮೊದಲು ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಕಳ್ಳ ದಾರಿಯಲ್ಲಿ ಅಧಿಕಾರ ಪಡೆದಿರುವ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ಆರೋಪಿಸಿದರು.

ಸರ್ಕಾರ ರಚನೆಗೆ ಸೂಕ್ತ ಶಾಸಕರ ಕೊರತೆಯ ಹೊರತಾಗಿಯೂ ಅಧಿಕಾರ ಪಡೆಯಲೇಬೇಕೆಂಬ ಬಿಜೆಪಿಯ ಲಾಲಸೆ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ ಎಂದು ರಾಹುಲ್ ಹರಿಹಾಯ್ದರು.

ಮತ್ತೊಂದು ದಿನ ಫಡ್ನವೀಸ್‌ ಸರ್ಕಾರ ಸೇಫ್, ನಾಳೆ ಸುಪ್ರೀಂ ಅಂತಿಮ ತೀರ್ಪು!

ಇತ್ತ ಸುಪ್ರೀಂಕೋರ್ಟ್’ನಲ್ಲಿ ವಿಚಾರಣೆ ಮುಂದುವರೆದಿದ್ದು, ಫಡ್ನವೀಸ್ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಇಂದೇ ಸಮಯ ನಿಗದಿಪಡಿಸಬೇಕು ಎಂದು ಶೀವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ ಪರ ವಕೀಲ ಅಭಿಷೇಕ್ ಸಿಂಘ್ವಿ ಒತ್ತಾಯಿಸಿದ್ದಾರೆ.

ಆದರೆ ಬಿಜೆಪಿ ಪರ ವಕೀಲ ಮುಕುಲ್ ರೋಹ್ಟಗಿ ಸದನದ ನಿಯಮಾವಳಿಗಳ ಮೇಲೆ ನ್ಯಾಯಾಲಯ ನಿಯಂತ್ರಣ ಹೇರಲು ಬಾರದು ಎಂದು ವಾದ ಮಂಡಿಸಿದ್ದಾರೆ.