Asianet Suvarna News Asianet Suvarna News

ಕೊನೆಗೂ ಕಾಂಗ್ರೆಸ್ ಪಕ್ಷ ಅಧ್ಯಕ್ಷರ ಚುನಾವಣೆಗೆ ಮುಹೂರ್ತ ಫಿಕ್ಸ್, ದಿನಾಂಕ ಘೋಷಿಸಿದ CWC!

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಅನ್ನೋದು ಖಚಿತವಾಗಿದೆ. ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಚುನಾವಣೆಗೆ ದಿನಾಂಕ ಘೋಷಿಸಿದೆ. 

Congress Working Committee announces party President election on October 17th ckm
Author
Bengaluru, First Published Aug 28, 2022, 5:59 PM IST

ನವದೆಹಲಿ(ಆ.28): ಕೊನೆಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಖಚಿತವಾಗಿದೆ. ಇಂದು ಸಭೆ ಸೇರಿದ ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷದ ಆತಂಕ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ಸಭೆ ನಡೆಸಿದ ಅಕ್ಟೋಬರ್ 17ಕ್ಕೆ ಚುನಾವಣೆ ನಡೆಸಲು ನಿರ್ಧರಿಸಿದೆ. ಇನ್ನು ಫಲಿತಾಂಶ ಅಕ್ಟೋಬರ್ 19ಕ್ಕೆ ಘೋಷಣೆಯಾಗಲಿದೆ. ಅಕ್ಟೋಬರ್ 19 ರಂದು ಕಾಂಗ್ರೆಸ್ ಪಕ್ಷ ನೂತನ ಅಧ್ಯಕ್ಷರನ್ನು ಕಾಣಲಿದೆ. ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಬಿಜೆಪಿ ಸೇರಿದಂತೆ ಹಲವು ಪಕ್ಷಗಳ ಟೀಕೆಗೆ ಉತ್ತರ ನೀಡಲು ಹಾಗೂ ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲು ಕಾಂಗ್ರೆಸ್ ಮುಂದಾಗಿದೆ.

ಸೆಪ್ಟೆಂಬರ್ 22 ರಂದು ಆಲ್ ಇಂಡಿಯಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಚುನಾವಣೆ ಕುರಿತು ನೋಟಿಫಿಕೇಶನ್ ಹೊರಡಿಸಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 24 ರಿಂದ 30 ರೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಅಕ್ಟೋಬರ್ 8 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. 

ದೆಹಲಿ ಉಪ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಅಥವಾ ಕಿತ್ತೆಸೆಯಿರಿ, ಆಪ್ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಬೆಳಗ್ಗೆ 100 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಇನ್ನು ಅಕ್ಟೋಬರ್ 19 ರಂದು ಬೆಳಕ್ಕೆ 10 ಗಂಟೆಗೆ ಮತ ಏಣಿಕೆ ನಡೆಸಿ ಫಲಿತಾಂಶ ಘೋಷಣೆಯಾಗಲಿದೆ. ಸೆಪ್ಟೆಂಬರ್ 4 ರಂದು ಕಾಂಗ್ರೆಸ್ ಆಯೋಜಿಸುತ್ತಿರುವ ಭಾರತತ್ ಜುಡೋ ಯಾತ್ರೆ ಆರಂಭಗೊಳ್ಳುತ್ತಿದೆ. 

2019ರ ಲೋಕಸಭಾ ಚುನಾವಣೆ ಸೋಲು ಹಾಗೂ ಅದರ ಹಿಂದಿನ ವಿಧಾನಸಭಾ ಚುನಾವಣೆ ಸೋಲಿನಿಂದ  ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. 2019ರಿಂದ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 2 ವರ್ಷದಿಂದ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿದ್ದರೆ. ಇನ್ನು ಇತ್ತೀಚೆಗಿನ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್‌ಗೆ ಜವಾಬ್ದಾರಿ ನೀಡಲು ಮುಂದಾಗಿತ್ತು. ಆದರೆ ಅಶೋಕ್ ಗೆಹ್ಲೋಟ್ ನಯವಾಗಿ ಈ ಆಫರ್ ತಿರಸ್ಕರಿಸಿದ್ದರು.

 

ಕಾಂಗ್ರೆಸ್‌ ಅಧ್ಯಕ್ಷರಾಗಿ ಮರಳಲು ರಾಹುಲ್‌ ಗಾಂಧಿಯನ್ನೇ ಒತ್ತಾಯಿಸುತ್ತೇವೆ: ಖರ್ಗೆ

ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಗೆ ರಾಹುಲ್ ಗಾಂಧಿ ಸ್ಪರ್ಧಿಸಬೇಕು ಅನ್ನೋ ಮಾತುಗಳು ಕೇಳಿಬರುತ್ತಿದೆ. ರಾಹುಲ್ ಗಾಂಧಿಯ ಪಕ್ಷವನ್ನು ಮುನ್ನಡೆಸಲು ಸಮರ್ಥರು ಎಂದು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

Follow Us:
Download App:
  • android
  • ios