Asianet Suvarna News Asianet Suvarna News

ಭಾರತಕ್ಕೆ ಅಪಾಯದ ಸೂಚನೆ ನೀಡಿದ ಕೇರಳ; 24 ಗಂಟೆಯಲ್ಲಿ 300 ಕೋವಿಡ್ ಕೇಸ್, 3 ಸಾವು!

ಭಾರತಕ್ಕೆ ಮತ್ತೆ ಕೇರಳ ಕೋವಿಡ್ ಅಪಾಯದ ಸೂಚನೆ ನೀಡುತ್ತಿದೆ. ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 300 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇಷ್ಟೇ ಅಲ್ಲ ಮೂರು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

Coronavirus alert Kerala Report 300 fresh covid 19 cases in last 24 hours ckm
Author
First Published Dec 21, 2023, 9:31 PM IST

ತಿರುವನಂತಪುರಂ(ಡಿ.21) ಭಾರತದಲ್ಲಿ ಕೊರೋನಾ ಪ್ರಕರಣ ಎಚ್ಚರಿಕೆ ಕರೆಗಂಟೆ ನೀಡುತ್ತಿದೆ. ಕರ್ನಾಟಕದಲ್ಲಿಂದು 24 ಪ್ರಕರಣ ದಾಖಲಾಗಿದೆ. ಆದರೆ ಕೇರಳದಲ್ಲಿ ಈ ಸಂಖ್ಯೆ 300ರ ಗಡಿ ದಾಟಿದೆ. ಇಷ್ಟೇ ಅಲ್ಲ 3 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 358 ಕೋವಿಡ್ ಪ್ರಕರಣ ದಾಖಲಾಗಿದೆ. ಈ ಪೈಕಿ 300 ಪ್ರಕರಣ ಕೇರಳದಲ್ಲೇ ಪತ್ತೇಯಾಗಿದೆ. ಇದೀಗ ದೇಶದ ಸಕ್ರೀಯ ಕೋವಿಡ್ ಪ್ರಕರಣಗಳ ಸಂಖ್ಯೆ 2,341ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ ದೇಶದಲ್ಲಿ 211 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. 

ಕೇರಳದಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ಆದರೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಜ್ಞವೈದ್ಯರು ಹೇಳಿದ್ದಾರೆ. ಕೇರಳ ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದೆ. ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಿಸಲಾಗಿದೆ. ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ. ಮೈಲ್ಡ್ ಸಿಂಪ್ಟಮ್ಸ್ ಕೋವಿಡ್ ಕಾರಣ ಬಹುತೇಕರಿಗೆ ಹೋಮ್ ಐಸೋಲೇಶನ್ ಮಾಡಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ರಾಜ್ಯದಲ್ಲಿಂದು 24 ಜನರಿಗೆ ಕೊರೋನಾ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ!
 
ಹಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಕೋವಿಡ್‌ ಬಗ್ಗೆ ಎಚ್ಚರಿಕೆ ಇರಲಿ, ಆತಂಕ ಬೇಡ ಎಂದು ಮನವಿ ಮಾಡಿದ್ದಾರೆ.

ವರ್ಚುವಲ್‌ ವಿಧಾನಸಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಮಾಂಡವೀಯ, ಕೋವಿಡ್‌ ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳು ಸನ್ನದ್ಧವಾಗಿರಬೇಕು. ಎಲ್ಲಾ ರಾಜ್ಯಗಳಿಗೂ ಅಗತ್ಯವಿರುವ ಸಹಕಾರವನ್ನು ಕೇಂದ್ರ ಸರ್ಕಾರ ಒದಗಿಸಲಿದೆ. ಕೋವಿಡ್‌ ಹೊಸ ರೂಪಾಂತರಿಯ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಆದರೆ ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ. ಜೀನೋಮ್‌ ಸೀಕ್ವೆನ್ಸಿಂಗ್‌ ನಡೆಸಲು ಬೇಕಿರುವ ಸೌಲಭ್ಯಗಳನ್ನು ರಾಜ್ಯ ಸರ್ಕಾರಗಳು ಕಲ್ಪಿಸಬೇಕು ಎಂದು ಸೂಚಿಸಿದರು.

ವಿಶ್ವದಾದ್ಯಂತ ನಿತ್ಯ 51,214 ಸರಾಸರಿ ವರದಿಯಾಗುತ್ತಿದ್ದು 2.16 ಕೋಟಿ ಸಕ್ರಿಯ ಸೋಂಕಿತರು ವಿಶ್ವದಾದ್ಯಂತ ಇದ್ದಾರೆ. ಈ ಪೈಕಿ ಬ್ರೆಜಿಲ್‌ 11.73 ಲಕ್ಷ, ಅಮೆರಿಕ 9.89 ಲಕ್ಷ, ವಿಯೆಟ್ನಾಂ 9.39 ಲಕ್ಷದಷ್ಟಿದೆ. ವಿಶ್ವದ ಒಟ್ಟಾರೆ ಪ್ರಕರಣಗಳಲ್ಲಿ ಭಾರತದಲ್ಲಿ ಶೇ.0.009 ರಷ್ಟು ಮಾತ್ರ ಇವೆ. ಹೀಗಾಗಿ ಯಾವುದೇ ರೀತಿಯ ಆತಂಕ ಪಡಬೇಕಾಗಿಲ್ಲ. ಆದರೆ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
 

Follow Us:
Download App:
  • android
  • ios