Asianet Suvarna News Asianet Suvarna News

ದೆಹಲಿಗೆ ಪೂರೈಕೆಯಾದ ಆಕ್ಸಿಜನ್ ಪ್ರಮಾಣ ಎಷ್ಟು? ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ!

ಕೊರೋನಾ ವೈರಸ್‌ನಿಂದ ರಾಷ್ಟ್ರ ರಾಜಧಾನಿ ತತ್ತರಿಸಿದೆ. ಆಕ್ಸಿಜನ್ ಕೊರತೆ ಸೇರಿದಂತೆ ಸಾಲು ಸಾಲು ಸಮಸ್ಯೆಗಳು ದೆಹಲಿಯನ್ನು ಕಾಡುತ್ತಿದೆ. ಇದರ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಮ್ಲಜನಕ, ಲಸಿಕೆ ಸೇರಿದಂತೆ ವೈದ್ಯಕೀಯ ಸಲಕರಣೆ ಪೂರೈಕೆ ಕುರಿತು ಕೇಂದ್ರವನ್ನು ಪ್ರಶ್ನಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Coronavirus Delhi high court ask center to provide oxygen supply details ckm
Author
Bengaluru, First Published May 5, 2021, 5:03 PM IST

ನವದೆಹಲಿ(ಮೇ.05): ಕೊರೋನಾ ವೈರಸ್ 2ನೇ ಅಲೆಗೆ ದೇಶದಲ್ಲಿ ಹಲವು ಸಮಸ್ಯೆಗಳು ತಲೆದೋರಿದೆ. ಪ್ರಮುಖವಾಗಿ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆ ಕಾಡುತ್ತಿದೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕೇಂದ್ರ ಹಾಗೂ ದೆಹಲಿ ನಡುವಿನ ಜಟಾಪಟಿ ನಡುವೆ ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್ ಇದೀಗ ಕೇಂದ್ರ ಸರ್ಕಾರದ ಬಳಿ ಹಲವು ಪ್ರಶ್ನೆಗಳನ್ನು ಕೇಳಿದೆ.

'ಕೊರೋನಾ ನಿಯಂತ್ರಣಕ್ಕೆ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್‌

ಮೇ.3 ರಿಂದ ಇಲ್ಲೀವರೆಗೆ ದೆಹಲಿಗೆ ಪೂರೈಕೆ ಮಾಡಿರುವ ಆಕ್ಸಿಜನ ಪ್ರಮಾಣ ಎಷ್ಟು ಎಂದು ಹೈಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ. ಸದ್ಯ ಜನರ ಜೀವವನ್ನು ಉಳಿಸುವ ಕಾರ್ಯ ಮುಖ್ಯವಾಗಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಮೇ 3 ರಂದು ದೆಹಲಿಗೆ ಪ್ರತಿ ದಿನ 700 ಟನ್ ಆಕ್ಸಿಜನ್ ಪೂರೈಸುವಂತೆ ಸೂಚಿಸಿತ್ತು.

ಇದರ ನಡುವೆ ಆಕ್ಸಿಜನ್ ಪೂರೈಕೆಯಲ್ಲಿನ ನಿರ್ದೇಶ ಪಾಲಿಸದ ಅಧಿಕಾರಿಗಳ ವಿರುದ್ಧ ದೆಹಲಿ ಕೋರ್ಟ್ ನ್ಯಾಯಾಂಗ ನಿಂದನೆ ನೊಟೀಸ್ ನೀಡಿತ್ತು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ ಕೇಂದ್ರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಸೋಂಕಿತರ ಚಿಕಿತ್ಸೆ, ಕೊರೋನಾ ತಡೆಗಟ್ಟುವ ಪ್ರಯತ್ನಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಕೋರ್ಟ್ ಸೂಚಿಸಿದೆ.

Follow Us:
Download App:
  • android
  • ios