ಚೆನ್ನೈ (ಮಾ. 25): ಮಾರಕ ಕೊರೋನಾ ವೈರಸ್​ಗೆ ದೇಶದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ಭಾರತದಲ್ಲಿ  ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್‌ಗೆ ಬಲಿಯಾದ ವ್ಯಕ್ತಿ ತಮಿಳುನಾಡಿನವರಾಗಿದ್ದು, ಈ ಮೂಲಕ ಕೊರೋನಾ ಭೀತಿ ಮತ್ತಷ್ಟು ಹೆಚ್ಚಿದೆ. 

ತಮಿಳುನಾಡಿನ 54 ವರ್ಷದ ವ್ಯಕ್ತಿ ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೊರೋನಾ ಸೋಂಕು ತಗಲಿರುವುದು ಸೋಮವಾರ ದೃಢವಾಗಿದ್ದು, ಚಿಕಿತ್ಸೆ ಆರಂಭಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು, ಬುಧವಾರ ಬೆಳಗ್ಗೆ ಅವರು ಮೃತಪಟ್ಟಿರುವುದಾಗಿ ತಮಿಳುನಾಡಿನ ಆರೋಗ್ಯ ಸಚಿವ ಡಾ. ಸಿ. ವಿಜಯ ಭಾಸ್ಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಸದ್ಯ ಭಾರತದಲ್ಲಿ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಈ ಮೂಲಕ ಜನರು ಮನೆಯಲ್ಲೇ ಇರುವಂತೆ ಸೂಚನೆ ನಿಡಲಾಗಿದೆ.