Asianet Suvarna News Asianet Suvarna News

ಪ್ರತಿಯೊಬ್ಬರಿಗೂ ಕೊರೋನಾ ಪರೀಕ್ಷೆ, ಸರ್ವ ಪಕ್ಷ ಸಭೆಯಲ್ಲಿ ಅಮಿತ್ ಶಾ ಘೋಷಣೆ!

ಕೊರೋನಾ ವೈರಸ್ ತಡೆಯಲು ಜನತಾ ಕರ್ಫ್ಯೂ, ಲಾಕ್‌ಡೌನ್, ಅನ್‌ಲಾಕ್ ಸೇರಿದಂತೆ ಬಹುತೇಕ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ವೈರಸ್ ದಿನದಿಂದ ದಿನಕ್ಕೆ ಹಬ್ಬುತ್ತಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೊಸ್ ಪ್ಲಾನ್ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

Coronavirus test made available everyone in Delhi says Amit shah
Author
Bengaluru, First Published Jun 15, 2020, 5:41 PM IST

ನವದೆಹಲಿ(ಜೂ.15): ಕೊರೋನಾ ವೈರಸ್ ನಿಯಂತ್ರಣದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸರ್ವ ಪಕ್ಷ ಸಭೆ ನಡೆಸಿದ್ದಾರೆ.  ಪ್ರಮುಖವಾಗಿ ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾಗೆ ಬ್ರೇಕ್ ಹಾಕಲು ಅಖಾಡಕ್ಕೆ ಅಮಿತ್ ಶಾ ಧುಮುಕಿದ್ದಾರೆ. ಸಭೆಯಲ್ಲಿ ದೆಹಲಿಯ ಪ್ರತಿಯೊಬ್ಬರಿಗೂ ಕೊರೋನಾ ಪರೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ. 

ನಿಮ್ಮನೆ ಹತ್ತಿರ ಕೊರೋನಾ ಟೆಸ್ಟಿಂಗ್ ಸೆಂಟರ್ ಎಲ್ಲಿದೆ ಅಂತ ಹೇಳುತ್ತೆ ಗೂಗಲ್!

ಅಮಿತ್ ಶಾ, ದೆಹಲಿ ರಾಜ್ಯಪಾಲ ಅನಿಲ್ ಬೈಜಲ್, ಬಿಜೆಪಿ, ಕಾಂಗ್ರೆಸ್, ಬಿಎಸ್‌ಪಿ ಹಾಗೂ ಎಸ್‌ಪಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್,ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಹಾಗೂ ಆರೋಗ್ಯ ಮಂತ್ರಿ ಸತ್ಯೇಂದ್ರ ಜೈನ್ ಗೈರು ಹಾಜರಿ ಎದ್ದುಕಾಣುತ್ತಿತ್ತು. ಆಪ್ ಪಕ್ಷದಿಂದ ಸಂಸದ ಸಂಜಯ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿ ಕೊರೊನಾ ಸಾವಿನ ಲೆಕ್ಕದಲ್ಲಿ ಭಾರತ ನಂ 1.!.

ದೆಹಲಿಯಲ್ಲಿ ಕೊರೋನಾ ವೈರಸ್ ಮಿತಿ ಮೀರುತ್ತಿದೆ. ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕಡಿಮೆ ವೆಚ್ಚದಲ್ಲಿ ಕೊರೋನಾ ತಪಾಸಣೆ ನಡೆಸಲು ಸಾಧ್ಯವಾಗಬೇಕು. ಹೀಗಾಗಿ ಐಸಿಎಂಆರ್ ಸಹಯೋಗದಲ್ಲಿ 450 ರೂಪಾಯಿಗೆ ಕೊರೋನಾ ವೈರಸ್ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸರ್ವಪಕ್ಷೆ ಸಭೆಯಲ್ಲಿ ಅಮಿತ್ ಶಾ ಹೇಳಿದರು.

ದೆಹಲಿಯಲ್ಲಿ ಜರನು ಆತಂಕಗೊಂಡಿದ್ದಾರೆ. ಕೊರೋನಾ ವೈರಸ್ ಅಷ್ಟರಮಟ್ಟಿಗೆ ದೆಹಲಿಯಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣ ಮಾಡಿದೆ. ಹೀಗಾಗಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಕ್ರಾಂಗ್ರೆಸ್ ಒತ್ತಾಯಿಸಿತು. ದೆಹಲಿಯಲ್ಲಿ ಕೊರೋನಾ ವೈರಸ್‌ಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳ ಬೆಡ್ ಭರ್ತಿಯಾಗಿದೆ. ಜನರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ವ್ಯವಸ್ಥೆಗಳು ಸಮರ್ಪಕವಾಗಿಲ್ಲ. ಹೀಗಾಗಿ ದೆಹಲಿಯಲ್ಲಿ ಕೊರೋನಾ ಸಂಖ್ಯೆ ಬೆಳೆಯುತ್ತಿದೆ ಅನ್ನೋ ವಾದವೂ ಕೇಳಿ ಬಂತು. 

ಕೊರೋನಾ ಸೋಂಕಿತರ ಕುಟುಂಬ ಹಾಗೂ ನಿರ್ಗತಿಕರ ಕುಟುಂಬಕ್ಕೆ ತಲಾ 10,000 ರೂಪಾಯಿಯನ್ನು ಧನಸಹಾಯದ ರೂಪದಲ್ಲಿ ನೀಡಬೇಕು. ಈಗಾಗಲೇ ಕೆಲಸ ಹಾಗೂ ಕ್ವಾರಂಟೈನ್ ಸಂಕಷ್ಟದಿಂದ ಜನರು ಆಹಾರವಿಲ್ಲದೆ ಬಳಲುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿತು. ಪ್ರತಿ ದಿನ 18,000 ಕೊರೋನಾ ವೈರಸ್ ಟೆಸ್ಟ್ ನಡೆಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಆಪ್ ಹೇಳಿದೆ.

ದೆಹಲಿಯಲ್ಲಿ ಎಲ್ಲರಿಗೂ ಕೊರೋನಾ ಪರೀಕ್ಷೆ ನಡೆಸುವುದು ಸೂಕ್ತ. ಪಾಸಿಟೀವ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ, ಐಸೋಲೇಶನ್, ಕುಟುಂಬಸ್ತರಿಗೆ, ಸಂಪರ್ಕಿತರಿಗೆ ಕ್ವಾರಂಟೈನ್ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ.
 

Follow Us:
Download App:
  • android
  • ios