ಮಹಾರಾಷ್ಟ್ರದಲ್ಲಿ 9170, ದೆಹಲಿಯಲ್ಲಿ 2716 ಕೇಸು ಮಹಾ 2 ದಿನಕ್ಕೆ, ದಿಲ್ಲೀಲಿ ಒಂದೇ ದಿನಕ್ಕೆ ಡಬಲ್‌

ನವದೆಹಲಿ/ಮುಂಬೈ(ಜ.02): 2ನೇ ಅಲೆಯಲ್ಲಿ ಅತಿ ಹೆಚ್ಚು ಅನಾಹುತ ಸಂಭವಿಸಿದ್ದ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಹೊಸ ಕೋವಿಡ್‌ ಕೇಸುಗಳಲ್ಲಿ ಭಾರೀ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಶನಿವಾರ 9170 ಪ್ರಕರಣ ಪತ್ತೆಯಾಗಿವೆ. ಶುಕ್ರವಾರಕ್ಕೆ ಹೋಲಿಸಿಕೊಂಡರೆ ಕೇಸಲ್ಲಿ ಶೇ.13ರಷ್ಟುಹೆಚ್ಚಾಗಿದೆ. ಜೊತೆಗೆ ಎರಡೇ ದಿನದಲ್ಲಿ ರಾಜ್ಯದಲ್ಲಿ ಹೊಸ ಕೇಸುಗಳು ದ್ವಿಗುಣವಾಗಿದೆ. ಗುರುವರ ರಾಜ್ಯದಲ್ಲಿ 5368 ಕೇಸು ದಾಖಲಾಗಿತ್ತು. ಇನ್ನು ರಾಜ್ಯದ ಒಟ್ಟಾರೆ ಸೋಂಕಿತರ ಪೈಕಿ 6347 ಕೋವಿಡ್‌ ಕೇಸ್‌ಗಳು ಮುಂಬೈ ನಗರವೊಂದರಲ್ಲೇ ಪತ್ತೆಯಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ದೆಹಲಿಯಲ್ಲಿ ಶನಿವಾರ 2716 ಪ್ರಕರಣ ಪತ್ತೆಯಾಗಿವೆ. ಶುಕ್ರವಾರಕ್ಕೆ ಹೋಲಿಸಿಕೊಂಡರೆ ಸೋಂಕಿನ ಪ್ರಮಾಣ ಶೇ.51ರಷ್ಟುಹೆಚ್ಚಳವಾಗಿದೆ. ಶುಕ್ರವಾರ ಶೇ.2.4ರಷ್ಟಿದ್ದ ಕೋವಿಡ್‌ ಪಾಸಿಟಿವಿಟಿ ದರ ಶನಿವಾರ 3.64ಕ್ಕೆ ಜಿಗಿದಿದೆ. 7 ತಿಂಗಳ ನಂತರ ಇದೇ ಮೊದಲ ಸಲಹ ದಿಲ್ಲಿಯಲ್ಲಿ ದಾಖಲಾದ ಸಾರ್ವಕಾಲಿಕ ದೈನಂದಿನ ಗರಿಷ್ಠ ಸೋಂಕು ಇದು.

Massive jump in COVID 19 case: 16764 ಕೋವಿಡ್‌ ಕೇಸ್‌, 64 ದಿನಗಳ ಗರಿಷ್ಠ

ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 22,775 ಕೋವಿಡ್‌ ಪ್ರಕರಣಗಳು ದಾಖಲಾಗಿದೆ. ಇದು 86 ದಿನಗಳ ಗರಿಷ್ಠ ದೈನಂದಿನ ಪ್ರಕರಣಗಳ ಸಂಖ್ಯೆಯಾಗಿದೆ. ಶುಕ್ರವಾರಕ್ಕಿಂತ 6011 ಪ್ರಕರಣಗಳು ಹೆಚ್ಚು ದಾಖಲಾಗಿವೆ. ಇದೇ ಅವಧಿಯಲ್ಲಿ 406 ಸೋಂಕಿತರು ಸಾವಿಗೀಡಾಗಿದ್ದು, ಒಟ್ಟು ಪ್ರಕರಣ 3.48 ಕೋಟಿಗೆ ಮತ್ತು ಒಟ್ಟು ಸಾವು 4.81 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣ 1.04 ಲಕ್ಷ ದಾಟಿದೆ. ಇದರೊಂದಿಗೆ ತಿಂಗಳ ನಂತರ ಸಕ್ರಿಯ ಕೇಸು ಲಕ್ಷದ ಗಡಿ ದಾಟಿದಂತಾಗಿದೆ. ದೈನಂದಿನ ಪಾಸಿಟಿವಿಟಿ ದರವೂ 2.05ರಷ್ಟುದಾಖಲಾಗಿದೆ. ಅಲ್ಲದೇ ಕೇವಲ 2 ದಿನದಲ್ಲಿ ದೈನಂದಿನ ಪ್ರಕರಣಗಳ ಪ್ರಮಾಣ ಎರಡು ಪಟ್ಟಿಗಿಂತ ಹೆಚ್ಚಾಗಿದೆ. ಗುರುವಾರ 9195 ಕೇಸು ದಾಖಲಾಗಿದ್ದರೆ, ಶನಿವಾರ ಅದು 3 ಪಟ್ಟು ಹೆಚ್ಚಾಗಿದೆ.

ಬೆಂಗಳೂರಲ್ಲೂ ಹೆಚ್ಚಿದ ಕೊರೋನಾ ಅಬ್ಬರ:

ನಗರದಲ್ಲಿ ಆರು ತಿಂಗಳ ನಂತರ ಗರಿಷ್ಠ ಸೋಂಕಿತ ಪ್ರಕರಣಗಳು (Covid 19 Cases) ಪತ್ತೆಯಾಗಿದ್ದು, ಶುಕ್ರವಾರ 353 ಪುರುಷರು, 303 ಮಹಿಳೆಯರು ಸೇರಿದಂತೆ 656 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಒಂದೇ ದಿನ ಐವರು ಮೃತರಾಗಿದ್ದು, 211 ಮಂದಿ ಚೇತರಿಸಿಕೊಂಡಿದ್ದಾರೆ. ಜುಲೈ 1ರಂದು 676 ಕೊರೋನಾ ಸೋಂಕಿತ ಪ್ರಕರಣಗಳು ದಾಖಲಾಗಿತ್ತು. ಜು.7ರಂದು 611 ಪ್ರಕರಣ ಪತ್ತೆಯಾಗಿದ್ದು, ಈ ಆರು ತಿಂಗಳಲ್ಲಿನ ದಾಖಲಾಗಿದ್ದ ಅತ್ಯಧಿಕ ಸೋಂಕಿತ ಪ್ರಕರಣವಾಗಿದ್ದವು. ಇದಾದ ನಂತರ ಇಳಿಕೆಯಾಗಿದ್ದ ಪ್ರಕರಣಗಳ ಸಂಖ್ಯೆ ಶುಕ್ರವಾರ ಏರಿಕೆಯಾಗಿದ್ದು, ಪಾಸಿಟಿವಿಟಿ ದರ ಶೇ.74 ದಾಖಲಾಗಿದೆ. ಈವರೆಗೆ 0.56ರಷ್ಟಿತ್ತು.

ಹೊಸ ಪ್ರಕರಣಗಳ ಪತ್ತೆಯಿಂದ ಈವರೆಗಿನ ಸೋಂಕಿತರ ಸಂಖ್ಯೆ 12,63,618ಕ್ಕೆ ಏರಿಕೆಯಾಗಿದೆ. 211 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಬಿಡುಗಡೆಯಾದವರ ಸಂಖ್ಯೆ 12,39,931ಕ್ಕೆ ಏರಿಕೆಯಾಗಿದೆ. ಐವರ ಸಾವಿನಿಂದ ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,400ಕ್ಕೆ ಹೆಚ್ಚಳವಾಗಿದೆ. ನಗರದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 7,286ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಹಿತಿ ನೀಡಿದೆ.

ಕಳೆದ ಹತ್ತು ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಲ್ಲಿ ನಿತ್ಯ ಸರಾಸರಿ 5ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಳ್ಳಂದೂರು ವಾರ್ಡ್‌ನಲ್ಲಿ 18, ದೊಡ್ಡನೆಕ್ಕುಂದಿ 8, ಅರಕೆರೆ, ಎಚ್‌ಎಸ್‌ಆರ್‌ ಲೇಔಟ್‌ ತಲಾ 7, ಹಗದೂರು, ವರ್ತೂರು ವಾರ್ಡ್‌ಗಳಲ್ಲಿ ತಲಾ 6 ಮತ್ತು ಶಾಂತಲ ನಗರ, ಕೋರಮಂಗಲ, ಬೇಗೂರು ಮತ್ತು ಬ್ಯಾಟರಾಯನಪುರ ವಾರ್ಡ್‌ನಲ್ಲಿ ತಲಾ 5 ಪ್ರಕರಣಗಳು ಪತ್ತೆಯಾಗುತ್ತಿವೆ.