Asianet Suvarna News Asianet Suvarna News

Delhi Riots 2020: ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್, ಸೈಫಿ ಖುಲಾಸೆ

2020ರಲ್ಲಿ ನಡೆದ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು  ನ್ಯಾಯಾಲಯ ಖುಲಾಸೆಗೊಳಿಸಿದೆ. 

Court discharges Umar Khalid in  Delhi  Riots 2020 case gow
Author
First Published Dec 3, 2022, 9:27 PM IST

ನವದೆಹಲಿ (ಡಿ.3): 2020 ರ ಈಶಾನ್ಯ ದೆಹಲಿ ಗಲಭೆ ಮತ್ತು ಕಲ್ಲು ತೂರಾಟ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿಗಳ ಒಕ್ಕೂಟದ ನಾಯಕ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸದಸ್ಯ ಖಾಲಿದ್ ಸೈಫಿ ಅವರನ್ನು ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ಫೆಬ್ರವರಿ 2020 ರಂದು ದೆಹಲಿಯ ಚಾಂದ್ ಬಾಗ್‌ನಲ್ಲಿ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಗುಂಪನ್ನು ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ನೇತೃತ್ವ ವಹಿಸಿದ್ದರು ಎಂದು ಪೊಲೀಸ್ ಕಾನ್ಸ್‌ಟೇಬಲ್ ಹೇಳಿಕೆಯನ್ನು ಆಧರಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120-ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 

ಈ ಪ್ರಕರಣದಲ್ಲಿ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಂಬಿ ಹಿಂದೆ ಉಳಿದಿದ್ದಾರೆ. ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪ ಹೊರಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನ ವಿವರವಾದ ವಿಚಾರಣೆಯ ನಂತರ, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪರ್ಮಾಚಲ ಅವರು ವಿದ್ಯಾರ್ಥಿ ನಾಯಕರನ್ನು ಖುಲಾಸೆಗೊಳಿಸುವ ನಿರ್ಧಾರವನ್ನು ಪ್ರಕಟಿಸಿದರು. ಅಕ್ಟೋಬರ್‌ನಲ್ಲಿ ನಡೆದ ದೆಹಲಿ ಗಲಭೆ ಪ್ರಕರಣದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ರಾಜಧಾನಿಯಲ್ಲಿ ನಡೆದ ಈ ಗಲಭೆಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಅಕ್ಟೋಬರ್‌ನಲ್ಲಿ ನಿರಾಕರಿಸಿತು.

ಉಮರ್ ಖಾಲಿದ್‌ಗೆ ಬಿಗ್ ಶಾಕ್, ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಅರ್ಜಿ ತಿರಸ್ಕೃತ!

ಕರವಾಲ್ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಆಸ್ತಿ ಹಾನಿ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿತ್ತು.

ದಿಲ್ಲಿ ಹಿಂಸೆ: ತಾಹಿರ್‌ ವಿರುದ್ಧ ದಂಗೆ, ಲೂಟಿಯ ಆರೋಪ, ಹಿಂದೂಗಳನ್ನು ಗುರಿಯಾಗಿಸಿ ಹಿಂಸಾಚಾರ

ಉಮರ್ ಖಾಲಿದ್ ಅವರು  ಇತರ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ ಮತ್ತು ಗಲಭೆಗಳ ಹಿಂದಿನ ದೊಡ್ಡ ಪಿತೂರಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯಲ್ಲಿ  ಪ್ರಕರಣ ದಾಖಲಿಸಲಾಗಿದ್ದು, ಈ ಪ್ರಕರಣಗಳು ನ್ಯಾಯಾಲಯದಲ್ಲಿ ನಡೆಯುತ್ತಿದೆ.

Follow Us:
Download App:
  • android
  • ios