ಯೋಗಿ ಸೇರಿ ನಾಲ್ವರು ಸಿಎಂಗಳ ಜೊತೆ ಮೋದಿ ಮಾತು, ಕೊರೋನಾ ಬಗ್ಗೆ ಮಾಹಿತಿ!

* ದೇಶದಲ್ಲಿ ಎರಡನೇ ಕೊರೋನಾ ಅಲೆ ಕೊಂಚ ಇಳಿಮುಖ

* ಸಿಎಂಗಳ ಜೊತೆ ಕೊರೋನಾ ಪರಿಸ್ಥಿತಿ ಬಗ್ಗೆ ಪಿಎಂ ಮೋದಿ ಮಾತು

* ರಾಜಸ್ಥಾನ ಛತ್ತೀಸ್‌ಗಢ, ಉತ್ತರ ಪ್ರದೇಶ ಹಾಗೂ ಪುದುಚೇರಿ ಮುಖ್ಯಮಂತ್ರಿಗಳೊಡನೆ ಸಂಭಾಷಣೆ

covid 19  PM Modi calls on CMs of Rajasthan Chhattisgarh Uttar Pradesh and Puducherry pod

ನವದೆಹಲಿ(ಮೇ.16): ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಮುಖಗೊಂಡಿದೆ. ಕೊರೋನಾ ನಿಯಂತ್ರಣ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯಗಳ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಸೂಕ್ತ ಸಲಹೆ ಸೂಚನೆ ನೀಡುತ್ತಿದ್ದಾರೆ. ಅಲ್ಲದೇ ಈ ಮಹಾಮಾರಿ ನಿಯಂತ್ರಣಕ್ಕೆ ಕೇಂದ್ರದಿಂದಲೂ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಭರವಸೆಯನ್ನೂ ನೀಡಿದ್ದಾರೆ.

ಇಂದು ಭಾನುವಾರ ಪಿಎಂ ಮೋದಿ ಕೊರೋನಾ ನಿಯಂತ್ರಣ ಸಂಬಂಧ ರಾಜಸ್ಥಾನ ಛತ್ತೀಸ್‌ಗಢ, ಉತ್ತರ ಪ್ರದೇಶ ಹಾಗೂ ಪುದುಚೇರಿ ಮುಖ್ಯಮಂತ್ರಿಗಳೊಡನೆ ಸಂಭಾಷಣೆ ನಡೆಸಿದ್ದಾರೆ.

ಸಿಎಂ ಯೋಗಿ ಜೊತೆ ಪಿಎಂ ಮೋದಿ ಮಾತು

ಉತ್ತರ ಪ್ರದೇಶದ ಯೋಗಿ ಸರ್ಕಾರ ಕೊರೋನಾದಿಂದಾಗಿ ರಾಜ್ಯದಲ್ಲಿ ಮೃತಪಟ್ಟವರ ವಿಚಾರವಾಗಿ ಭಾರೀ ಚರ್ಚೆಯಲ್ಲಿದೆ. ಹೀಗಿರುವಾಗಲೇ ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಜೊತೆ ಮಾತುಕತೆ ನಡೆಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ಕೊರೋನಾದಿಂದಾಗಿ ನಿರ್ಮಾಣವಾಗಿರುವ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಿದ ಮೋದಿ, ಕೆಂದ್ರದಿಂದ ನೀಡಲಾಗುವ ಎಲ್ಲಾ ರೀತಿಯ ಸಹಾಯ ಒದಗಿಸುವುದಾಗಿಯೂ ಭರವಸೆ ನೀಡಿದ್ದಾರೆ.

"

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಭತ್ತಿಸ್‌ಗಢ ಸಿಎಂ ಭೂಪೇಶ್ ಭಗೇಲ ಹಾಗೂ ಪುದುಚೇರಿಯ ಸಿಎಂ ಎನ್‌ ರಂಗಸಾಮಿ ಜೊತೆಗೂ ಮಾತುಕತೆ ನಡೆಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Latest Videos
Follow Us:
Download App:
  • android
  • ios