24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 94052 ಹೊಸ ಸೋಂಕಿತರು ಪತ್ತೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಇಳಿಕೆ ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.91 ಕೋಟಿ

ನವದೆಹಲಿ (ಜೂ.11): ಗುರುವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 94052 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 6148 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಲಕ್ಷಕ್ಕಿಂತ ಕೆಳಗೇ ದಾಖಲಾದಂತೆ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ನಡುವೆ ಬಿಹಾರ ಸರ್ಕಾರ, ರಾಜ್ಯದಲ್ಲಿ ಈವರೆಗೆ ಸಂಭವಿಸಿದ ಸಾವಿನ ಪ್ರಕರಣವನ್ನು ಗುರುವಾರ ದಿಢೀರನೆ 5500ರಿಂದ 9429ಕ್ಕೆ ಏರಿಸಿದೆ. ಹೀಗಾಗಿ ದೇಶದಲ್ಲಿ ಸಾವಿನ ಸಂಖ್ಯೆ ದಾಖಲೆಯ 6148ಕ್ಕೆ ತಲುಪಿದೆ.

ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆಯನ್ನು ಸೂಕ್ತ ಪ್ರಮಾಣದಲ್ಲಿ ನೀಡುತ್ತಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಪಟನಾ ಹೈಕೋರ್ಟ್‌ ಬುಧವಾರವಷ್ಟೇ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರ ಸಾವಿನ ಸಂಖ್ಯೆಯನ್ನು ದಿಢೀರನೆ 5500ರಿಂದ 9429ಕ್ಕೆ ಹೆಚ್ಚಿಸಿದೆ. ಅಂದರೆ ಒಂದೇ ದಿನ 3929ರಷ್ಟುಹೆಚ್ಚಳ ಮಾಡಿದೆ. ಈ ಸಾವು ಸಂಭವಿಸಿದ ಅವಧಿ ಯಾವುದು ಎಂಬುದನ್ನು ಸರ್ಕಾರ ಬಹಿರಂಗಪಡಿಸಿಲ್ಲ.

8 ಡಿಸಿಗಳೊಂದಿಗೆ ಸಿಎಂ ಸಂವಾದ, ಈ ಜಿಲ್ಲೆಗಳಲ್ಲಿ ರೂಲ್ಸ್ ಮತ್ತಷ್ಟು ಕಟ್ಟುನಿಟ್ಟು

ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.91 ಕೋಟಿಗೆ, ಸಾವಿನ ಸಂಖ್ಯೆ 3.59 ಲಕ್ಷಕ್ಕೆ, ಸಕ್ರಿಯ ಪ್ರಕರಣಗಳ ಸಂಖ್ಯೆ 11.67 ಲಕ್ಷಕ್ಕೆ, ಚೇತರಿಕೆ ಪ್ರಮಾಣ ಶೇ.94.77ಕ್ಕೆ, ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ.4.69ಕ್ಕೆ ತಲುಪಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona