ಪ್ರಧಾನಿ ನರೇಂದ್ರ ಮೋದಿ ಭೇಟಿಗೆಂದು ದೆಹಲಿಗೆ ತೆರಳಿದ್ದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸುಖವಿಂದರ್ ಸಿಂಗ್ ಸುಖು ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಇದರ ಬೆನ್ನಲ್ಲೇ ಸುಖು ಅವರ ಮೋದಿ ಭೇಟಿ ಹಾಗೂ ಗುರುವಾರದಿಂದ ಆರಂಭವಾಗಬೇಕಿದ್ದ ಹಿಮಾಚಲ ವಿಧಾನಸಭಾ ಅಧಿವೇಶನವನ್ನು ಮುಂದೂಡಲಾಗಿದೆ.
ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಭೇಟಿಗೆಂದು ದೆಹಲಿಗೆ ತೆರಳಿದ್ದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸುಖವಿಂದರ್ ಸಿಂಗ್ ಸುಖು ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಇದರ ಬೆನ್ನಲ್ಲೇ ಸುಖು ಅವರ ಮೋದಿ ಭೇಟಿ ಹಾಗೂ ಗುರುವಾರದಿಂದ ಆರಂಭವಾಗಬೇಕಿದ್ದ ಹಿಮಾಚಲ ವಿಧಾನಸಭಾ ಅಧಿವೇಶನವನ್ನು ಮುಂದೂಡಲಾಗಿದೆ. ಪ್ರಧಾನಿ ಭೇಟಿಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ನಡೆಸಲಾಗುವ ಪರೀಕ್ಷೆಯಲ್ಲಿ ಸುಖವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.
ಇದೇ ವೇಳೆ ನೂತನ ಶಾಸಕರಿಗೆ ಪ್ರಮಾಣವಚನ ಬೋಧನೆ ಹಾಗೂ ಸ್ಪೀಕರ್ ಆಯ್ಕೆ ಕೂಡ ಗುರುವಾರ ನಡೆಯಬೇಕಿತ್ತು. ಎಲ್ಲವೂ ಮುಂದೂಡಿಕೆ ಆಗಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆಗಳಿವೆ. ಸುಖು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವರನ್ನು ಭೇಟಿಯಾಗಿದ್ದರು. ಅಲ್ಲದೇ ಸುಖು ಹಾಗೂ ಶಾಸಕರು ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಿದ್ದರು.
ಅಟಲ್ ಸುರಂಗ ಹೆಸರು ಬದಲಿಸುವ ನಿರ್ಧಾರ ಕೈಬಿಟ್ಟ ಹಿಮಾಚಲ ಕಾಂಗ್ರೆಸ್!
ಬಸ್ ಚಾಲಕನ ಪುತ್ರ ಈಗ ಹಿಮಾಚಲ ಸಿಎಂ : ಹಾಲಿನ ಬೂತ್ ನಡೆಸುತ್ತಿದ್ದ ಸುಖು..!