Asianet Suvarna News Asianet Suvarna News

ಕೋವಿಡ್ : ಮದ್ಯದಂಗಡಿ ಪ್ರವೇಶಕ್ಕೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

  • ಬಾರ್, ವೈನ್ ಶಾಪ್ ಎಂಟ್ರಿಗೂ  ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ
  • ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ
Covid negative report mandatory for buying liquor  in kerala snr
Author
Bengaluru, First Published Aug 12, 2021, 10:34 AM IST

ಮಂಗಳೂರು(ಆ.12):  ಕೇರಳದಲ್ಲಿ ಬಾರ್, ವೈನ್ ಶಾಪ್ ಎಂಟ್ರಿಗೂ  ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ. ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. 

ಕೋವಿಡ್ ಪ್ರಕರಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಗಡಿ ಭಾಗ ಕಾಸರಗೋಡು ಸೇರಿ ರಾಜ್ಯಾದ್ಯಂತ ಹೊಸ ರೂಲ್ಸ್ ಜಾರಿ ಮಾಡಲಾಗಿದೆ.

ಕೇರಳದ ಮದ್ಯದಂಗಡಿ ಎದುರು ಜನದಟ್ಟಣೆ ಹೆಚ್ಚಾಗಿರುವ ಹಿನ್ನೆಲೆ ಕಠಿಣ ನಿಯಮ ಜಾರಿ ಮಾಡಲಾಗುತ್ತದೆ. ನೆಗೆಟಿವ್ ಸರ್ಟಿಫಿಕೇಟ್ ಅಥವಾ ಒಂದು ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. 

ದೇವರ ನಾಡು ತಲ್ಲಣ: ಲಸಿಕೆ ಪಡೆದ 40,000 ಜನಕ್ಕೆ ಸೋಂಕು!

72 ಗಂಟೆಗಳ ಒಳಗಿನ ನೆಗೆಟಿವ್ ಸರ್ಟಿಫಿಕೇಟ್ ಇಲ್ಲದೇ ಇದ್ದರೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ. ಕೆಲ ದಿನಗಳ ಹಿಂದಷ್ಟೇ ಮದ್ಯದಂಗಡಿಗಳ ಎದುರು ಸರತಿ ಸಾಲಿನಲ್ಲಿ ಅತೀ ಹೆಚ್ಚು ಜನರು ನಿಲ್ಲುತ್ತಿದ್ದು ಈ ಬಗ್ಗೆ ಕೇರಳ ಹೈಕೋರ್ಟ್ ಗರಂ ಆಗಿತ್ತು. ಮದ್ಯದಂಗಡಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು.

ಮದ್ಯದಂಗಡಿಗಳ ಎದುರು ಜನದಟ್ಟಣೆಯೂ ಕೋವಿಡ್ ಹೆಚ್ಚಳಕ್ಕೆ ಕಾರಣವಾಗಿತ್ತು. ಇದರಿಂದ ಇದೀಗ ಹೊಸದಾಗಿ ಮದ್ಯದಂಗಡಿಗೆ ಬರುವವರಿಗೂ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.

Follow Us:
Download App:
  • android
  • ios