Asianet Suvarna News Asianet Suvarna News

ಹಸುಗಳು, ಸಗಣಿ, ಗೋಮೂತ್ರವು ಆರ್ಥಿಕತೆಗೆ ವೇಗ ನೀಡುತ್ತವೆ: ಸಿಎಂ ಶಿವರಾಜ್ ಸಿಂಗ್ ಚೌಹಾಣ್!

* ಆರ್ಥಿಕತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾತು

* ಹಸುಗಳು ಮತ್ತು ಅವುಗಳ ಸಗಣಿ, ಮೂತ್ರ ಉತ್ತಮ ಆರ್ಥಿಕ ಸಾಮರ್ಥ್ಯ ಹೊಂದಿದೆ

Cows their dung urine can help boost economy Madhya Pradesh CM Shivraj Singh Chouhan pod
Author
Bangalore, First Published Nov 14, 2021, 11:11 AM IST

ಭೋಪಾಲ್(ನ.14): ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಹಸುಗಳು ಮತ್ತು ಅವುಗಳ ಸಗಣಿ, ಮೂತ್ರ ಉತ್ತಮ ಆರ್ಥಿಕ ಸಾಮರ್ಥ್ಯವನ್ನು ಹೊಂದಿದೆ ಮತ್ತು ಅವು ರಾಜ್ಯ ಮತ್ತು ದೇಶದ ಆರ್ಥಿಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ಹೇಳಿದ್ದಾರೆ. 

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಚೌಹಾಣ್, "ಗೋವುಗಳು, ಅವುಗಳ ಸಗಣಿ ಮತ್ತು ಮೂತ್ರವು ರಾಜ್ಯ ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ, ಸರಿಯಾದ ವ್ಯವಸ್ಥೆ ಜಾರಿಗೆ ಬಂದರೆ ನಾವುವೊಂದು ದಿನ ಈ ವಿಚಾರದಲ್ಲಿ ಯಶಸ್ವಿಯಾಗುತ್ತೇವೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ. 

ಭೋಪಾಲ್‌ನಲ್ಲಿ ನಡೆದ ಭಾರತೀಯ ಪಶುವೈದ್ಯಕೀಯ ಸಂಘದ ಮಹಿಳಾ ವಿಭಾಗದ 'ಶಕ್ತಿ 2021' ಸಮಾವೇಶದಲ್ಲಿ ಮಾತನಾಡಿದ ಸಿಎಂ ಚೌಹಾಣ್, ಗೋವಿನ ಸಗಣಿ ಮತ್ತು ಮೂತ್ರದಿಂದ ಈಗ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. “ರಾಜ್ಯದಲ್ಲಿ ಅನೇಕ ಜನರು ಕೆಲವು ಸ್ಮಶಾನಗಳಲ್ಲಿ ಮರದ ಬದಲಿಗೆ ಹಸುವಿನ ಸಗಣಿ ಬಳಸುತ್ತಿದ್ದಾರೆ,” ಎಂದು ಅವರು ಉಲ್ಲೇಖಿಸಿದ್ದಾರೆ.

ಸರ್ಕಾರವು ಗೋವು ಅಭಯಾರಣ್ಯ ಮತ್ತು ಗೋಶಾಲೆಗಳನ್ನು ಅಭಿವೃದ್ಧಿಪಡಿಸಿದೆ ಆದರೆ ಅದು ಏಕಾಂಗಿಯಾಗಿ ಕೆಲಸ ಮಾಡುವುದಿಲ್ಲ ಮತ್ತು ಸಮಾಜದ ಸಹಭಾಗಿತ್ವದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸಣ್ಣ ರೈತರು ಮತ್ತು ಜಾನುವಾರು ಮಾಲೀಕರಿಗೆ ಹಸು ಸಾಕಣೆ ಹೇಗೆ ಲಾಭದಾಯಕ ವ್ಯವಹಾರವಾಗಬಹುದು ಎಂಬುದರ ಕುರಿತು ಪಶುವೈದ್ಯರು ಮತ್ತು ತಜ್ಞರು ಫಲಿತಾಂಶ ಆಧಾರಿತ ಕೆಲಸದಲ್ಲಿ ತೊಡಗಬೇಕು ಎಂದು ಅವರು ತಿಳಿಸಿದ್ದಾರೆ.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರ್ಶೋತ್ತಮ್ ರೂಪಾಲಾ, ಗುಜರಾತ್‌ನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಸು ಸಾಕಣೆ ಮಾಡುತ್ತಿದ್ದಾರೆ ಮತ್ತು ಇದು ಡೈರಿ ವ್ಯವಹಾರದ ಯಶಸ್ಸಿಗೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಆಯ್ಕೆ ಮಾಡುವ ಮಹಿಳಾ ಪಶುವೈದ್ಯಕೀಯ ಪದವೀಧರರಿಗೆ ಸಹಾಯ ಮಾಡುವಂತೆ ರೂಪಾಲಾ ಕೇಂದ್ರವನ್ನು ಒತ್ತಾಯಿಸಿದರು.
 

Follow Us:
Download App:
  • android
  • ios