* ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ವಿಶ್ವಾಸ* ಶಾಂತಿ ಸ್ಥಾಪನೆ ಆದರೆ ಪಡೆಗಳು ವಾಪಸ್‌* ಕೆಲ ವರ್ಷದಲ್ಲಿ ಕಾಶ್ಮೀರದಿಂದ ಸಿಆರ್‌ಪಿಎಫ್‌ ವಾಪಸ್‌: ಶಾ

ನವದೆಹಲಿ(ಮಾ.20): ದೇಶದ ಅತಿ ದೊಡ್ಡ ಅರೆಸೇನಾ ಪಡೆ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ (ಸಿಆರ್‌ಪಿಎಫ್‌)ಯ ಕಾರ‍್ಯವೈಖರಿಯನ್ನು ಶ್ಲಾಘಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ‘ಇನ್ನು ಕೆಲವೇ ವರ್ಷಗಳಲ್ಲಿ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ಭಾರತದಲ್ಲಿ ಸಿಆರ್‌ಪಿಎಫ್‌ನ ಅಗತ್ಯ ಇರುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀನಗರದ ಮೌಲಾನಾ ಆಜಾದ್‌ ಕ್ರೀಡಾಂಗಣದಲ್ಲಿ ಸಿಆರ್‌ಪಿಎಫ್‌ನ 83ನೇ ರೈಸಿಂಗ್‌ ಡೇ ಪರೇಡ್‌ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್‌ ಶಾ, ‘ಕಾಶ್ಮೀರ, ನಕ್ಸಲ… ಪ್ರದೇಶಗಳು ಮತ್ತು ಈಶಾನ್ಯದಲ್ಲಿ ಸಿಆರ್‌ಪಿಎಫ್‌ ಕೆಲಸ ಮಾಡುತ್ತಿರುವ ವಿಧಾನವು ಮುಂದಿನ ಕೆಲವು ವರ್ಷಗಳಲ್ಲಿ ಈ ಎಲ್ಲಾ ಪ್ರದೇಶಗಳಲ್ಲಿ ಸಿಆರ್‌ಪಿಎಫ್‌ ಬಳಕೆಯ ಅಗತ್ಯವಿಲ್ಲ. ಏಕೆಂದರೆ ಮೂರು ಪ್ರದೇಶಗಳಲ್ಲಿ ಸಂಪೂರ್ಣ ಶಾಂತಿಯನ್ನು ಕಾಪಾಡಿಕೊಳ್ಳಬಹುದು ಎಂಬ ವಿಶ್ವಾಸ ಮೂಡಿಸಿದೆ. ಇದು ಸಾಧ್ಯವಾದಲ್ಲಿ ಅದರ ಸಂಪೂರ್ಣ ಕ್ರೆಡಿಟ್‌ ಸಿಆರ್‌ಪಿಎಫ್‌ಗೆ ಸಲ್ಲುತ್ತದೆ’ ಎಂದು ಹೇಳಿದರು.

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ನೆರೆಯ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಕೇಂದ್ರೀಯ ಪಡೆ ನಿರ್ಣಾಯಕ ಹೋರಾಟ ನಡೆಸುಸುತ್ತಿರುವುದು ಅತ್ಯಂತ ಶ್ಲಾಘನೀಯ. ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದತಿ ನಂತರದ ದೊಡ್ಡ ಸಾಧನೆಯೆಂದರೆ ಭದ್ರತಾ ಪಡೆಗಳು ಭಯೋತ್ಪಾದನೆಯ ಮೇಲೆ ನಿರ್ಣಾಯಕ ನಿಯಂತ್ರಣವನ್ನು ಹೊಂದಿರುವುದು ಎಂದು ಹೇಳಿದರು.

ಭಾರತದ ಮುಕುಟ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆ ಹತ್ತಿಕ್ಕಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಸಿಆರ್‌ಪಿಎಫ್‌ನ ಸುಮಾರು ನಾಲ್ಕನೇ ಒಂದು ಭಾಗವನ್ನು ಅಲ್ಲಿ ನಿಯೋಜಿಸಲಾಗಿದೆ.

ಏ.24 ರಂದು ಮೋದಿ ಜಮ್ಮು-ಕಾಶ್ಮೀರ ಭೇಟಿ ಸಾಧ್ಯತೆ!

ಪಂಚಾಯತಿ ರಾಜ್‌ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್‌ 24 ರಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ವೇಳೆ ಅವರು ಜಮ್ಮು ಹಾಗೂ ಕಾಶ್ಮೀರದ ಪಂಚಾಯತಿ ರಾಜ್‌ ಸಂಸ್ಥೆಯ ಸದಸ್ಯರೊಂದಿಗೆ ಮಾತುಕತೆ ನಡೆಸಲಿದ್ದು, ಕೈಗಾರಿಕಾ ಹೂಡಿಕೆಗೆ ಚಾಲನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆಗಳಿವೆ. ಬಹುಶಃ ಜಮ್ಮುವಿನಲ್ಲಿ ಸಮಾರಂಭ ನಡೆಯುವ ಸಾಧ್ಯತೆ ಇದೆ.

ಏಪ್ರಿಲ್‌ 24 ರಂದು ದೇಶದಲ್ಲಿ ಪಂಚಾಯತಿ ರಾಜ್‌ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷವೂ ಈ ದಿನದಂದು ಪ್ರಧಾನಿ ದೇಶದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಪಂಚಾಯತಿ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಾರೆ. ಈ ಬಾರಿ ಪ್ರಧಾನಿ ಜಮ್ಮು ಹಾಗೂ ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಜಿಲ್ಲಾ ಅಭಿವೃದ್ಧಿ ಮಂಡಳಿ, ಬ್ಲಾಕ್‌ ಅಭಿವೃದ್ಧಿ ಮಂಡಳಿ, ಪಂಚಾಯತಿಯ ಸರಪಂಚ ಹಾಗೂ ಪಂಚರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷವೂ ಪ್ರಧಾನಿ ಮೋದಿ ವಿಶ್ವದ ನಂ.1 ಜನಪ್ರಿಯ ನಾಯಕ

ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿ 3 ಹಂತದ ಪಂಚಾಯತಿ ರಾಜ್‌ ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ. ಅಲ್ಲದೇ 2022-23ರ ಆರ್ಥಿಕ ವರ್ಷಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಜಮ್ಮು ಕಾಶ್ಮೀರಕ್ಕೆ ವಾರ್ಷಿಕ ಬಜೆಟ್‌ ಘೋಷಿಸಿದ್ದು ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸಾಕಷ್ಟುಅನುದಾನ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಯ ವೇಳೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ಕೈಗೊಳ್ಳುವ ಸಾಧ್ಯತೆಗಳಿವೆ.

ಈ ಮೊದಲು ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಅಕ್ಟೋಬರ್‌ 27, 2019ರಂದು ರಜೌರಿಯಲ್ಲಿ ಹಾಗೂ ನವೆಂಬರ್‌ 3, 2021ರಂದು ನೌಶೇರಾದಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದರು.

ಪ್ರಧಾನಿ ಮೋದಿ ಬಳಿ ವಿಭಿನ್ನ ದಕ್ಷಿಣೆ ಕೇಳಿದ ಕಾಶೀ ಪಂಡಿತರು, ಬದಲಾಗುತ್ತಾ ಕಾಶ್ಮೀರ?

ಭಾರತದಲ್ಲಿ 3.2 ಲಕ್ಷ ಕೋಟಿ ರು. ಹೂಡಿಕೆ: ಜಪಾನ್‌ ಘೋಷಣೆ

ಭಾರತದಲ್ಲಿ ಮುಂದಿನ 5 ವರ್ಷದಲ್ಲಿ 3.20 ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಜಪಾನ್‌ ಪ್ರಧಾನಿ ಫ್ಯುಮಿಕೋ ಕಿಶೀದಾ ಘೋಷಿಸಿದ್ದಾರೆ. ಇದು ಎರಡೂ ದೇಶಗಳ ನಡುವಿನ ಬಾಂಧವ್ಯ ಮತ್ತಷ್ಟುಗಟ್ಟಿಗೊಳ್ಳುವ ದ್ಯೋತಕವಾಗಿದೆ. 14ನೇ ಭಾರತ-ಜಪಾನ್‌ ಶೃಂಗದ ಹಿನ್ನೆಲೆಯಲ್ಲಿ ಜಪಾನ್‌ ಪ್ರಧಾನಿ ಫä್ಯಮಿಯೋ ಕಿಶಿದಾ ಅವರು ಶನಿವಾರ ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಾಗತಿಕ ಮತ್ತು ಪ್ರಾದೇಶಿಕ ವಿಷಯ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿ 6 ಒಪ್ಪಂದಗಳಿಗೆ ಸಹಿ ಹಾಕಿದರು.

ಈ ವೇಳೆ ಭಾರತದಲ್ಲಿ ಮುಂದಿನ 5 ವರ್ಷದಲ್ಲಿ 5 ಟ್ರಿಲಿಯನ್‌ ಯೆನ್‌ (3.20 ಲಕ್ಷ ಕೋಟಿ) ಹೂಡಿಕೆ ಮಾಡುವುದಾಗಿ ಕಿಶಿದಾ ಘೋಷಿಸಿದರು. ಜೊತೆಗೆ 300 ಬಿಲಿಯನ್‌ ಯೆನ್‌ ಸಾಲ ಮಂಜೂರಿಗೂ ಒಪ್ಪಿಗೆ ನೀಡಿದ್ದಲ್ಲದೆ, ಈಶಾನ್ಯ ಪ್ರದೇಶದ ಸುಸ್ಥಿರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಏತನ್ಮಧ್ಯೆ ಶುದ್ಧ ಇಂಧನ ಪೂರೈಕೆ ಸಂಬಂಧ ಉಭಯ ದೇಶಗಳು ಒಪ್ಪಂದ ಮಾಡಿಕೊಂಡಿವೆ.2014ರಲ್ಲಿಯೂ ಜಪಾನ್‌ ಪ್ರಧಾನಿ ಶಿಂಜೋ ಅಬೆ ಭಾರತದಲ್ಲಿ 3.5 ಟ್ರಿಲಿಯನ್‌ ಯೆನ್‌ ಹೂಡಿಕೆ ಮಾಡುವುದಾಗಿ ಘೋಷಿಸಿದ್ದರು.