ಮಿರ್ಜಾಪುರ[ಡಿ.05]: ಕೇಂದ್ರ ಮೀಸಲು ಪೊಲೀಸ್‌ ಪಡೆಯ ಯೋಧ ಸೇರಿದಂತೆ ನಾಲ್ವರು ದುರುಳರು 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ನಡೆಸಿದ ಪೈಶಾಚಿಕ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಬಾಲಕಿಯ ಮನೆಗೆ ತೆರಳಿದ್ದ ದುರುಳರು ಬಾಲಕಿಯನ್ನು ಬಲವಂತವಾಗಿ ವಾಹನದಲ್ಲಿ ಎಳೆದೊಯ್ದು, ಕಾಡಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅತ್ಯಾಚಾರ ನಡೆಸಿದ ಬಳಿಕ ಬಾಲಕಿಯನ್ನು ವಾಪಸ್‌ ಕರೆತರುತ್ತಿದ್ದ ವೇಳೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ಈ ಬಗ್ಗೆ ದೂರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.